ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಿದ್ದಾಜಿದ್ದಿ ಕಣವೆಂದೇ ಬಿಂಬಿತವಾಗಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮುಹೂರ್ತ ನಿಗದಿಯಾಗಲಿದೆ. ಸಂಜೆ 4.30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಪಂಚ ರಾಜ್ಯಗಳ ಚುನಾವಣೆ ಜೊತೆಗೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರಕ್ಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆಯಿದೆ.


COMMERCIAL BREAK
SCROLL TO CONTINUE READING

ಬಸವ ಕಲ್ಯಾಣ, ಮಸ್ಕಿ, ಸಿಂದಗಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇಂದೇ ದಿನಾಂಕ ನಿಗದಿಯಾಗುವುದು ಬಹುತೇಕ ಖಚಿತವಾಗಿದೆ. ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ(Suresh Angadi) ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ, ಶಾಸಕರಾಗಿದ್ದ ನಾರಾಯಣರಾವ್, ಸಿ.ಎನ್.ಮನಗೋಳಿ ಹಾಗೂ ಪ್ರತಾಪ್‍ಗೌಡ ರಾಜೀನಾಮೆಯಿಂದ ತೆರವಾಗಿರುವ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.


ಪೆಟ್ರೋಲ್ ಡಿಸೇಲ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್ ..! ಬಿಎಂಟಿಸಿ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ..!


ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಿದ್ದಾಜಿದ್ದಿ ಹೋರಾಟಕ್ಕೆ ಈ ಉಪಚುನಾವಣೆ(BY Election) ಸಾಕ್ಷಿಯಾಗಲಿದೆ.


"ಜಾತಿ ಭಾವನೆ ವಿದ್ಯಾವಂತರಲ್ಲಿಯೇ ಹೆಚ್ಚು. ಇದು ಅತ್ಯಂತ ಅಪಾಯಕಾರಿ"


ಶತಾಯಗತಾಯ ಎಲ್ಲ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ(BJP) ರಣತಂತ್ರ ರೂಪಿಸಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸುರೇಶ್ ಅಂಗಡಿಯವರ ಕುಟುಂಬದವರಿಗೆ ಇಲ್ಲವೇ ಬೇರೊಬ್ಬರಿಗೆ ಟಿಕೆಟ್ ನೀಡಬಹುದು.


Siddaramaiah: ಸಿದ್ದರಾಮಯ್ಯ ಅಖಾಡಕ್ಕಿಳಿದ್ರೂ 'ಕೈ' ತಪ್ಪಿದ ಮೈಸೂರು ಮೇಯರ್‌ ಪಟ್ಟ!


ಬಸವ ಕಲ್ಯಾಣದಿಂದ ಮುಖ್ಯಮಂತ್ರಿ ಯಡಿಯೂರಪ್ಪ(BS Yediyurappa)ನವರ ಪುತ್ರ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬ, ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಸಿಂಧಗಿಯಿಂದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೆಸರುಗಳು ಕೇಳಿಬಂದಿವೆ. ಅಂತಿಮವಾಗಿ ವರಿಷ್ಠರು ಯಾರಿಗೆ ಮಣೆ ಹಾಕುತ್ತಾರೆ ಎಂಬುದು ನಿಗೂಢವಾಗಿ ಉಳಿದಿದೆ.


Laxmi Hebbalkar: 'ರಮೇಶ್ ಜಾರಕಿಹೊಳಿಯನ್ನು ಮಂತ್ರಿ ಮಾಡಿದ್ದು ನಾನೇ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.