Ration Card: ರಾಜ್ಯದ 'ಪಡಿತರ ಚೀಟಿದಾರ'ರಿಗೆ ಸರ್ಕಾರದಿಂದ ಬಿಗ್ ಶಾಕ್..!

ಅಕ್ಕಿ ಹಾಗೂ ಗೋಧಿ ಪ್ರಮಾಣದಲ್ಲೂ ಕಡಿತಗೊಳಿಸಲಾಗುತ್ತಿದೆ. ಹೀಗೆ ಕಡಿತಗೊಳಿಸಿದಂತ ಪ್ರಮಾಣದಲ್ಲಿಯೇ ರಾಗಿ ಮತ್ತು ಜೋಳ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

Last Updated : Feb 13, 2021, 04:46 PM IST
  • ರಾಜ್ಯದಲ್ಲಿ ಭೌಗೋಳಿಕವಾಗಿ ಸ್ಥಳೀಯ ಆಹಾರ ಪದ್ದತಿಗೆ ಅನುಗುಣವಾಗಿ ಆಹಾರ ಧಾನ್ಯಗಳನ್ನು ಪಡಿತರದಾರರಿಗೆ ವಿತರಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ
  • ಅಕ್ಕಿ ಹಾಗೂ ಗೋಧಿ ಪ್ರಮಾಣದಲ್ಲೂ ಕಡಿತಗೊಳಿಸಲಾಗುತ್ತಿದೆ. ಹೀಗೆ ಕಡಿತಗೊಳಿಸಿದಂತ ಪ್ರಮಾಣದಲ್ಲಿಯೇ ರಾಗಿ ಮತ್ತು ಜೋಳ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.
  • ಈ ಮೂಲಕ ರಾಜ್ಯದ ಪಡಿತರದಾರರಿಗೆ ಬಿಗ್ ಶಾಕ್ ನೀಡಿದೆ.
Ration Card: ರಾಜ್ಯದ 'ಪಡಿತರ ಚೀಟಿದಾರ'ರಿಗೆ ಸರ್ಕಾರದಿಂದ ಬಿಗ್ ಶಾಕ್..! title=

ಬೆಳಗಾವಿ: ರಾಜ್ಯದಲ್ಲಿ ಭೌಗೋಳಿಕವಾಗಿ ಸ್ಥಳೀಯ ಆಹಾರ ಪದ್ದತಿಗೆ ಅನುಗುಣವಾಗಿ ಆಹಾರ ಧಾನ್ಯಗಳನ್ನು ಪಡಿತರದಾರರಿಗೆ ವಿತರಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಇದರೊಂದಿಗೆ ಅಕ್ಕಿ(Rice) ಹಾಗೂ ಗೋಧಿ ಪ್ರಮಾಣದಲ್ಲೂ ಕಡಿತಗೊಳಿಸಲಾಗುತ್ತಿದೆ. ಹೀಗೆ ಕಡಿತಗೊಳಿಸಿದಂತ ಪ್ರಮಾಣದಲ್ಲಿಯೇ ರಾಗಿ ಮತ್ತು ಜೋಳ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಪಡಿತರದಾರರಿಗೆ ಬಿಗ್ ಶಾಕ್ ನೀಡಿದೆ.

Anand Singh: ವಿಜಯನಗರ ಜಿಲ್ಲೆ ರಚನೆ ನಂತ್ರ ರಾಜಕೀಯ ನಿವೃತ್ತಿ ಬಗ್ಗೆ ಪ್ರತಿಕ್ರಿಯಿಸಿದ ಆನಂದ್‌ ಸಿಂಗ್‌

ಈ ಕುರಿತಂತೆ ಮಾಹಿತಿ ನೀಡಿದಂತ ಆಹಾರ, ನಾಗರೀಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ್ ಕತ್ತಿ(Umesh Katti), ಪಡಿತರದಲ್ಲಿ ಅಕ್ಕಿ ಮತ್ತು ಗೋಧಿ ವಿತರಣೆಯ ಪ್ರಮಾಣ ಕಡಿತಗೊಳಿಸಿ, ಅದೇ ಪ್ರಮಾಣದಲ್ಲಿ ರಾಗಿ, ಜೋಳ ಅಥವಾ ಸ್ಥಳೀಯವಾಗಿ ಬಳಕೆಯಲ್ಲಿರುವ ಧಾನ್ಯಗಳನ್ನು ವಿತರಿಸಲು ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.

ಸಮಾಜವನ್ನು ಬದಲಾವಣೆ ಮಾಡಲು Education ಬಿಟ್ಟರೆ ಬೇರೆ ಯಾವುದೇ ಮಾರ್ಗವಿಲ್ಲ: ಅಶ್ವತ್ಥನಾರಾಯಣ

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ 3 ಕೆಜಿ ಜೋಳ, 2 ಕೆಜಿ ಅಕ್ಕಿ ವಿತರಿಸಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 3 ಕೆಜಿ ರಾಗಿ, 2 ಕೆಜಿ ಅಕ್ಕಿ ಕೊಡಲಾಗುವುದು. ಭೌಗೋಳಿಕವಾಗಿ ಸ್ಥಳೀಯರ ಆಹಾರ(Food) ಪದ್ದತಿಗೆ ಅನುಗುಣವಾಗಿ ಪಡಿತರ ವಿತರಿಸಲಾಗುತ್ತದೆ ಎಂದು ಹೇಳುವ ಮೂಲಕ ಪಡಿತರದಾರರಿಗೆ ಬಿಗ್ ಶಾಕ್ ನೀಡಿದ್ದಾರೆ.

KSRTC: ಪ್ರಯಾಣಿಕರೆ ಗಮನಿಸಿ: ಸದ್ಯದಲ್ಲೇ ಬಸ್‌ ಪ್ರಯಾಣ ದರ ಏರಿಕೆ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News