close

News WrapGet Handpicked Stories from our editors directly to your mailbox

ಗೆಜೆಟ್ ಅಧಿಸೂಚನೆ; ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರವೂ ಸಿಗಲಿದೆ ರಜೆ!

ಆರನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಕ್ಯಾಬಿನೆಟ್ ನಾಲ್ಕನೇ ಶನಿವಾರವನ್ನು ಸಾರ್ವತ್ರಿಕ ರಜೆ ಎಂದು ಅಂಗೀಕರಿಸಿದ ಒಂದು ವಾರದ ಬಳಿಕ ಈ ಆದೇಶ ಹೊರಡಿಸಲಾಗಿದೆ. 

Updated: Jun 12, 2019 , 06:29 PM IST
ಗೆಜೆಟ್ ಅಧಿಸೂಚನೆ; ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರವೂ ಸಿಗಲಿದೆ ರಜೆ!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರವನ್ನು ಸಾರ್ವತ್ರಿಕ ರಜೆಯಾಗಿ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ಬುಧವಾರ ತಿಳಿಸಿದೆ.

ಆರನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಕ್ಯಾಬಿನೆಟ್ ನಾಲ್ಕನೇ ಶನಿವಾರವನ್ನು ಸಾರ್ವತ್ರಿಕ ರಜೆ ಎಂದು ಅಂಗೀಕರಿಸಿದ ಒಂದು ವಾರದ ಬಳಿಕ ಈ ಆದೇಶ ಹೊರಡಿಸಲಾಗಿದೆ. ಹೀಗಾಗಿ ಪ್ರತಿ ತಿಂಗಳು 2 ಮತ್ತು 4ನೇ ಶನಿವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ಸಿಕ್ಕಿದಂತಾಗಿದೆ. 

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಶಿವಕುಮಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಈ ಕೂಡಲೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ಘೋಷಿಸಿರುವ ಕಾರಣ ಈ ಹಿಂದೆ ಸರ್ಕಾರಿ ನೌಕರರಿಗೆ ವರ್ಷಕ್ಕೆ ನೀಡಲಾಗಿದ್ದ 15 ಸಾಂದರ್ಭಿಕ ರಜೆಗಳಲ್ಲಿ 5 ರಜೆ ಕಡಿತಗೊಳಿಸಲಾಗಿದ್ದು, 10 ಸಾಂದರ್ಭಿಕ ರಜೆ ತೆಗೆದುಕೊಳ್ಳಲು ಮಾತ್ರ ಅವಕಾಶ ನೀಡಲಾಗಿದೆ.