ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರವನ್ನು ಸಾರ್ವತ್ರಿಕ ರಜೆಯಾಗಿ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ಬುಧವಾರ ತಿಳಿಸಿದೆ.


COMMERCIAL BREAK
SCROLL TO CONTINUE READING

ಆರನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಕ್ಯಾಬಿನೆಟ್ ನಾಲ್ಕನೇ ಶನಿವಾರವನ್ನು ಸಾರ್ವತ್ರಿಕ ರಜೆ ಎಂದು ಅಂಗೀಕರಿಸಿದ ಒಂದು ವಾರದ ಬಳಿಕ ಈ ಆದೇಶ ಹೊರಡಿಸಲಾಗಿದೆ. ಹೀಗಾಗಿ ಪ್ರತಿ ತಿಂಗಳು 2 ಮತ್ತು 4ನೇ ಶನಿವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ಸಿಕ್ಕಿದಂತಾಗಿದೆ. 


ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಶಿವಕುಮಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಈ ಕೂಡಲೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ಘೋಷಿಸಿರುವ ಕಾರಣ ಈ ಹಿಂದೆ ಸರ್ಕಾರಿ ನೌಕರರಿಗೆ ವರ್ಷಕ್ಕೆ ನೀಡಲಾಗಿದ್ದ 15 ಸಾಂದರ್ಭಿಕ ರಜೆಗಳಲ್ಲಿ 5 ರಜೆ ಕಡಿತಗೊಳಿಸಲಾಗಿದ್ದು, 10 ಸಾಂದರ್ಭಿಕ ರಜೆ ತೆಗೆದುಕೊಳ್ಳಲು ಮಾತ್ರ ಅವಕಾಶ ನೀಡಲಾಗಿದೆ.