ಬೆಂಗಳೂರು : ಗಣೇಶೋತ್ಸವ ಆಚರಿಸುವ ಸಂಬಂಧ ರಾಜ್ಯ ಸರ್ಕಾರವು ಪರಿಷ್ಕತ ಮಾರ್ಗಸೂಚಿಗಳನ್ನು ನೀಡಿದ್ದು, ಅವುಗಳನ್ನು ಸಾರ್ವಜನಿಕರು ಪಾಲಿಸುವ ಮೂಲಕ ಸರಳ ಗಣೇಶೋತ್ಸವ ಆಚರಿಸಬೇಕೆಂದು ಮನವಿ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು.


ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು, ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಶನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು. ಒಂದು ವಾರ್ಡಿಗೆ / ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸಬೇಕು. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸಬೇಕು. ಏಕಕಾಲದಲ್ಲಿ 20 ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅವಕಾಶ ಮಾಡುವುದು.


ಗಣೇಶ ಮೂರ್ತಿ ಪ್ರತಿಷ್ಟಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕøತಿಕ, ಸಂಗೀತ, ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.


ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು ಮತ್ತು ಸರ್ಕಾರಿ/ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಟಾಪಿಸುವ ಗಣೇಶ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ/ ಜಿಲ್ಲಾಡಳಿತ/ ಹತ್ತಿರದ ಸ್ಥಳೀಯ ಸಂಸ್ಥೆಗಳ/ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್‍ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರಗಳಲ್ಲಿ ವಿಸರ್ಜಿಸಬೇಕು.


ಶ್ರೀ ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ/ ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯದ ಸ್ಯಾನಿಟೈಜೆಷನ್ ಮಾಡುವುದು. ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ 6 ಅಡಿ ಸಾಮಾಜಿಕ ಅಂತರ ಗುರುತಿಸುವುದು. ಋರ್ಮಲ್ ಸ್ಕ್ರೀನಿಂಗ್ ಮಾಡುವುದು. ಕಡ್ಡಾಯವಾಗಿ ಭಕ್ತಾಧಿಗಳು ಮಾಸ್ಕ್ ಧರಿಸುವಂತೆ ನೋಡಿಕೊಳ್ಳಬೇಕು ಎಂದು ಸರ್ಕಾರ ಮಾರ್ಗಸೂಚಿಗಳನ್ನು ನೀಡಿದೆ ಅದರಂತೆ ಪ್ರಸಕ್ತ ವರ್ಷದ ಗಣೇಶೋತ್ಸವ ಆಚರಣೆಯನ್ನು ಸಾರ್ವಜನಿಕರು ಸರಳವಾಗಿ ಆಚರಿಸಬೇಕು.