'ನಾಲ್ಕುವರೆ ಲಕ್ಷ ಕೋಟಿ ಸಾಲದ ಸುಳಿಯಲ್ಲಿ ರಾಜ್ಯ ಸರ್ಕಾರ'

2020-21ರಲ್ಲಿ ರಾಜ್ಯ ಸರ್ಕಾರ ಒಟ್ಟು ಋಣ ಭಾರ 3,98,219 ಕೋಟಿ ರೂ. ತಲುಪಿತ್ತು. ಇನ್ನು ಪ್ರಸಕ್ತ 2021-22 ಸಾಲಿನಲ್ಲಿ ರಾಜ್ಯ ಸರ್ಕಾರ 71,332 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿದೆ.ರಾಜ್ಯದ ಒಟ್ಟು ಸಾಲ ಹಾಗೂ ಋಣಭಾರ ಮಾರ್ಚ್ ಅಂತ್ಯಕ್ಕೆ 4,57,899 ಕೋಟಿ ರೂ‌.ಗೆ ಏರಿಕೆಯಾಗಲಿದೆ. 

Written by - Prashobh Devanahalli | Last Updated : Mar 2, 2022, 05:18 PM IST
  • ಕಳೆದ ಎರಡು ವರ್ಷದಿಂದ ಕೋವಿಡ್ ಲಾಕ್‌ಡೌನ್ ಹೇರಿದ ಆರ್ಥಿಕ ಸಂಕಷ್ಟಕ್ಕೆ ಆದಾಯ ಮೂಲ ಕುಗ್ಗಿದೆ.
  • ಕೇಂದ್ರ ಸರ್ಕಾರವೂ ರಾಜ್ಯಗಳಿಗೆ ಕಳೆದ ವರ್ಷದಿಂದ ಹೆಚ್ಚುವರಿ ಸಾಲ ಪಡೆಯಲು ಅನುಮತಿ ನೀಡಿದೆ.
  • ರಾಜ್ಯದ ಒಟ್ಟು ಸಾಲ ಹಾಗೂ ಋಣಭಾರ ಮಾರ್ಚ್ ಅಂತ್ಯಕ್ಕೆ 4,57,899 ಕೋಟಿ ರೂ‌.ಗೆ ಏರಿಕೆಯಾಗಲಿದೆ.
'ನಾಲ್ಕುವರೆ ಲಕ್ಷ ಕೋಟಿ ಸಾಲದ ಸುಳಿಯಲ್ಲಿ ರಾಜ್ಯ ಸರ್ಕಾರ' title=

ಬೆಂಗಳೂರು: 2020-21ರಲ್ಲಿ ರಾಜ್ಯ ಸರ್ಕಾರ ಒಟ್ಟು ಋಣ ಭಾರ 3,98,219 ಕೋಟಿ ರೂ. ತಲುಪಿತ್ತು. ಇನ್ನು ಪ್ರಸಕ್ತ 2021-22 ಸಾಲಿನಲ್ಲಿ ರಾಜ್ಯ ಸರ್ಕಾರ 71,332 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿದೆ.ರಾಜ್ಯದ ಒಟ್ಟು ಸಾಲ ಹಾಗೂ ಋಣಭಾರ ಮಾರ್ಚ್ ಅಂತ್ಯಕ್ಕೆ 4,57,899 ಕೋಟಿ ರೂ‌.ಗೆ ಏರಿಕೆಯಾಗಲಿದೆ. 

ಇಂತಹ ಸಾಲದ ಮಧ್ಯೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬಜೆಟ್ ಮಂಡನೆಗೆ ಅಂತಿಮ ಸಭೆಗಳನ್ನ ನಡೆಸುತ್ತಿದ್ದಾರೆ.ಸಂಪನ್ಮೂಲ ಕೊರತೆಯ ಮಧ್ಯೆ ಬಜೆಟ್ ಮಂಡನೆ ಮಾಡಬೇಕಾಗಿದ್ದು, ಈ ಬಾರಿ ಬಜೆಟ್ ನಿರ್ವಹಣೆಗಾಗಿ ಇನ್ನಷ್ಟು ಸಾಲದ ಮೊರೆ ಹೋಗುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ: ಉಕ್ರೇನ್ ವಿಷಯದಲ್ಲಿ ಭಾರತ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿರುವುದೇಕೆ?

ಮಾರ್ಚ್ 4ಕ್ಕೆ ಸಿಎಂ ಬೊಮ್ಮಾಯಿ ಮದ್ಯಾಹ್ನ 12:30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ.ಈ ಬಾರಿಯೂ ಬಂಡವಾಳ ವೆಚ್ಚವನ್ನು ಭರಿಸಲು ಸಾಲದ ಮೊರೆಹೋಗುವ ಪರಿಸ್ಥಿತಿ ಎದುರಾಗಿದೆ.ಕಳೆದ ಎರಡು ವರ್ಷದಿಂದ ಕೋವಿಡ್ ಲಾಕ್‌ಡೌನ್ ಹೇರಿದ ಆರ್ಥಿಕ ಸಂಕಷ್ಟಕ್ಕೆ ಆದಾಯ ಮೂಲ ಕುಗ್ಗಿದೆ.ಕೇಂದ್ರ ಸರ್ಕಾರವೂ ರಾಜ್ಯಗಳಿಗೆ ಕಳೆದ ವರ್ಷದಿಂದ ಹೆಚ್ಚುವರಿ ಸಾಲ ಪಡೆಯಲು ಅನುಮತಿ ನೀಡಿದೆ. 

2022-23 ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ 5,12,585 ಕೋಟಿ ರೂ. ತಲುಪುವ ಅಂದಾಜಿಸಲಾಗಿದೆ. ಅದೇ 2023-24ಕ್ಕೆ ರಾಜ್ಯದ ಒಟ್ಟು ಸಾಲ ಅಂದಾಜು 5,73,790 ಕೋಟಿ ರೂ. ತಲುಪಲಿದೆ. ಅದೇ 2024-25ರಲ್ಲಿ ರಾಜ್ಯದ ಒಟ್ಟು ಸಾಲದ ಹೊರೆ 6,42,578 ಕೋಟಿ ರೂ.ಗೆ ತಲುಪುವ ಅಂದಾಜು ಮಾಡಲಾಗಿದೆ. 2022-23ರಲ್ಲಿ ರಾಜ್ಯ ಸರ್ಕಾರ ಸುಮಾರು 75,000-80,000 ಕೋಟಿ ರೂ. ಸಾಲ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. 2020-21 ಸಾಲಿಗೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ ಸಾಲದ‌ ಪ್ರಮಾಣ ಸುಮಾರು 34% ಹೆಚ್ಚಳವಾಗಿದೆ. ಈ ಬಾರಿ ಸಾಲದ ಪ್ರಮಾಣ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Russia Ukraine Crisis: ‘ಮಲಿಬು’ ರಕ್ಷಣೆಗೆ ಮುಂದಾದ ಬೆಂಗಳೂರು ಯುವಕರ ತಂಡ

ಈ ವರ್ಷದ ಸಾಲ ಎಷ್ಟಿದೆ?

ಸರ್ಕಾರ ಈ ಆರ್ಥಿಕ ವರ್ಷದಲ್ಲಿ 71,332 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿದೆ.ಫೆಬ್ರವರಿ ಅಂತ್ಯದ ವರೆಗೆ ರಾಜ್ಯ ಸರ್ಕಾರ (Karnataka Budget) ಆರ್ ಬಿಐ ಮೂಲಕ 49,000 ಕೋಟಿ ರೂ. ಸಾಲ ಮಾಡಿದೆ. ಆರ್ಥಿಕ ವರ್ಷದ ಕೊನೆ ತಿಂಗಳಾದ ಮಾರ್ಚ್ ತಿಂಗಳಲ್ಲಿ ಆರ್ ಬಿಐ ಮೂಲಕ ಸುಮಾರು 20,000 ಕೋಟಿ ರೂ. ಸಾಲ ಎತ್ತುವಳಿ ಮಾಡಲಿದೆ.ಇದಲ್ಲದೆ ವಿಶ್ವ ಬ್ಯಾಂಕ್, ಏಷ್ಯಾ ಅಭಿವೃದ್ಧಿ ಬ್ಯಾಂಕ್ ಹಾಗೂ ಜಪಾನ್ ಅಂತರರಾಷ್ಟ್ರೀಯ ಸಹಕಾರ ಸಂಸ್ಥೆಗಳಿಂದ (ಜೈಕಾ) ವಿವಿಧ ಬೃಹತ್ ಯೋಜನೆಗಳಿಗೆ ಸಾಲ ಪಡೆದಿದೆ. 2021-22ರಲ್ಲಿ ಡಿಸೆಂಬರ್ ವರೆಗೆ 1,283.56 ಕೋಟಿ ರೂ. ಸಾಲ ಪಡೆದಿದೆ. ಅದೇ 2020-21ನೇ ಸಾಲಿನಲ್ಲಿ 1,402.55 ಕೋಟಿ ರೂ. ಸಾಲ ಮಾಡಿತ್ತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ... 
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News