ಬೆಂಗಳೂರು: ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumarswamy) ಕಿಡಿಕಾರಿದ್ದಾರೆ.


Covid 19) ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು (Teachers) ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಶಾಲೆ ತೆರೆಯುವ ಬಗ್ಗೆ ಆರೋಗ್ಯ ಇಲಾಖೆಯ ಸಲಹೆ ಕೇಳಿದ ಶಿಕ್ಷಣ ಇಲಾಖೆ

COMMERCIAL BREAK
SCROLL TO CONTINUE READING

ಕೊರೊನ ಕಾರಣಕ್ಕೆ ಮಕ್ಕಳು (Children) ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ? ಎಂದು ಕೇಳಿದ್ದಾರೆ.


ಸಾರ್ವಜನಿಕರೇ ಎಚ್ಚರ! ಇನ್ಮುಂದೆ ಮಾಸ್ಕ್ ಧರಿಸದಿದ್ದರೆ ಬೀಳಲಿದೆ ಭಾರೀ ದಂಡ


ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. 'ಹರ ಮುನಿದರೂ ಗುರು ಕಾಯ್ವನು' ಎಂಬುದನ್ನು ಸರಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1 ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.