ಬೆಂಗಳೂರು : ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದೆ. ಶೀಘ್ರವೇ ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ ಕೊಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಂಡು ಯೋಜನೆ ಆರಂಭಿಸುವ ಉತ್ಸಾಹದಲ್ಲಿದೆ ರಾಜ್ಯ ಸರ್ಕಾರ. 


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ಒದಗಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಇದಕ್ಕಾಗಿ ಹೊಸ ಹೊಸ ಆಹಾರಗಳನ್ನು ಪರಿಚಯಿಸುತ್ತಲೇ ಇದೆ. ಇದೀಗ ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡುವ ಚಿಂತನೆ ನಡೆಸಿದೆ. ಈ ಯೋಜನೆ 1 ರಿಂದ 10ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. 


ಇದನ್ನೂ ಓದಿ : ಡಿ.ಕೆ.ಶಿವಕುಮಾರ್ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ & ಪರಮ ಬಾಲಿಶ: ಎಚ್‌ಡಿಕೆ


ಶಾಲಾ ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಪ್ರಾದೇಶಿಕತೆ ಅನುಗುಣವಾಗಿ ಉತ್ತರ ಕರ್ನಾಟಕ ಭಾಗದ ಮಕ್ಕಳಿಗೆ ಜೋಳದ ರೊಟ್ಟಿ,  ದಕ್ಷಿಣ ಕರ್ನಾಟಕ ಭಾಗದ ಮಕ್ಕಳಿಗೂ ರಾಗಿ ಮುದ್ದೆ ನೀಡುವ ಕುರಿತು ಸಿದ್ಧತೆ ನಡೆಸುತ್ತಿದೆ. ಆದರೆ ದಕ್ಷಿಣ ಕನ್ನಡ ಭಾಗದಿಂದ ಈ ಯೋಜನೆಗೆ ಅಪಸ್ವರ ಕೇಳಿ ಬಂದಿದೆ. 


ಆಯಾ ಪ್ರಾದೇಶಿಕ ಭಾಗದವರಿಗೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ಆಹಾರ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಮಕ್ಕಳ ಊಟದಲ್ಲಿಯೂ ರಾಜಕೀಯ ಮಾಡುವುದು ಬೇಡ ಎಂಬ ಮಾತುಗಳು ಕೇಳಿಬಂದಿವೆ. ಯಾಕೆಂದರೆ ದಕ್ಷಿಣ ಕನ್ನಡ ಭಾಗದಲ್ಲಿ ರೊಟ್ಟಿ, ರಾಗಿ ಮುದ್ದೆ, ತಿನ್ನುವುದು ಅತ್ಯಂತ ವಿರಳ. ಈ  ಹಿನ್ನೆಲೆಯಲ್ಲಿ ಯೋಜನೆ ಜಾರಿಗೂ ಮುನ್ನ 
ಸರ್ಕಾರ ಸರಿಯಾಗಿ ಚಿಂತನೆ ನಡೆಸುವಂತೆ ಮನವಿ ಮಾಡಲಾಗಿದೆ. ಸರಿಯಾಗಿ ಯೋಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯ ಕೇಳಿ ಬಂದಿದೆ. 


ಇದನ್ನೂ ಓದಿ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ಕ್ಯಾಮೆರಾದಲ್ಲಿ ಸೆರೆ!


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.