ಬೆಂಗಳೂರು: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು. ತಮ್ಮ ಟೇಬಲ್ ಮೇಲೆ ನಾಮಫಲಕವನ್ನು ಇಡಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಜನರು ಕೆಲಸ ಕಾರ್ಯಗಳಿಗಾಗಿ ದಿನನಿತ್ಯ ಸರ್ಕಾರಿ ಕಚೇರಿಗಳಿಗೆ (Government office) ಭೇಟಿ ನೀಡುತ್ತಾರೆ. ಇಂತಹ ಸಮಯದಲ್ಲಿ ಯಾವ ಅಧಿಕಾರಿಗಳನ್ನು ಭೇಟಿ ಮಾಡಬೇಕು ಎಂಬ ಮಾಹಿತಿ ಜನರಿಗೆ ಇರುವುದಿಲ್ಲ. ಇದಕ್ಕಾಗಿ ಹೊಸ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.


ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದ ದೀಪಾವಳಿ ಗಿಫ್ಟ್


ಅಲ್ಲದೆ ಬ್ಯಾಂಕ್ (Bank) ಮತ್ತು ಅಂಚೆ ಕಚೇರಿಗಳಲ್ಲಿ (Post Office) ಇರುವಂತೆ ಅಧಿಕಾರಿ/ಸಿಬ್ಬಂದಿ ಹೆಸರು, ಹುದ್ದೆಯ ನಾಮಫಲಕಗಳನ್ನು ಅಳವಡಿಸಬೇಕು. ಅಧಿಕಾರಿ/ಸಿಬ್ಬಂದಿ ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.


ಈ ರೀತಿ ನಾಮಫಲಕ ಅಳವಡಿಕೆ ಮಾಡುವುದು, ಗುರುತಿನ ಚೀಟಿ ಧರಿಸುವುದರಿಂದ ಜನರು ಸಂಬಂಧಪಟ್ಟ ಅಧಿಕಾರಿಗಳನ್ನು ನೇರವಾಗಿ ಭೇಟಿ ಮಾಡಿ ಮಾಹಿತಿಗಳನ್ನು ಪಡೆಯಬಹುದಾಗಿದೆ. ಇದರಿಂದ ಸಮಯದ ಉಳಿತಾಯ ಸಹ ಆಗಲಿದೆ ಎಂದು ಹೇಳಲಾಗಿದೆ.


7th pay commission: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಮೋದಿ ಸರ್ಕಾರ


ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳು ತಮ್ಮ ಅಧೀನ ಇಲಾಖೆಗಳಿಗೆ ಹಾಗೂ ಸರ್ಕಾರ ಅಧೀನ ನಿಗಮ/ ಮಂಡಳಿಗಳ ಅಧಿಕಾರಿ/ಸಿಬ್ಬಂದಿಗಳಿಗೆ ಈ ಆದೇಶವನ್ನು ಪಾಲಿಸಲು ನಿರ್ದೇಶನ ನೀಡಬೇಕು ಎಂದು ಸೂಚಿಸಲಾಗಿದೆ.