ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು (Corona Virus) ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಬೇಕೋ ಬೇಡವೋ ಎಂಬ ಬಗ್ಗೆ ರಾಜ್ಯ ಸರ್ಕಾರ ಇಂದು ಮಹತ್ವದ ನಿರ್ಧಾರ ಕೈಗೊಳ್ಳುವ ಸಂಭವವಿದೆ.


COMMERCIAL BREAK
SCROLL TO CONTINUE READING

SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚರ್ಚಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ (S Suresh Kumar) ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ಕರೆದಿದ್ದಾರೆ. 


ಬೆಳಿಗ್ಗೆ 11 ಗಂಟೆಗೆ ಸರ್ವ ಶಿಕ್ಷಣ ಅಭಿಯಾನ ‌ಕಚೇರಿಯಲ್ಲಿ ನಡೆಯುವ ಸಭೆಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಆಯುಕ್ತರು ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು (CoronaVirus) ವ್ಯಾಪಕವಾಗಿ ಹೆಚ್ಚಾಗುತ್ತಿರುವುದರ ನಡುವೆಯೇ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದರಿಂದ ಆಗಬಹುದಾದ ಸಾಧಕಬಾಧಕಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.


ಇದನ್ನೂ ಓದಿ - SSLC Examination : ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಬದಲಾವಣೆ..!


ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ (CoronaVirus)  ಹೆಚ್ಚಾಗುತ್ತಿದೆ. ಮೇ ತಿಂಗಳ ಮಧ್ಯ ಭಾಗದಲ್ಲಿ ಕೊರೋನಾ ಸೊಂಕು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಆರೋಗ್ಯ ಕ್ಷೇತ್ರದ ತಜ್ಞರು (Health Sector Experts) ಎಚ್ಚರಿಸಿದ್ದಾರೆ. ಆದುದರಿಂದ ಹಿಂದೆ ನಿಗದಿಯಾಗಿರುವ ದಿನಾಂಕಗಳ ಪ್ರಕಾರ ಪರೀಕ್ಷೆ ನಡೆಸುವುದು ಸೂಕ್ತವಾ ಅಥವಾ ಪರೀಕ್ಷೆ ಮುಂದೂಡಿಕೆ ಮಾಡಬಹುದಾ? ಒಂದೊಮ್ಮೆ ಪರೀಕ್ಷೆಗಳನ್ನು ನಡೆಸಲೇಬೇಕು ಎನ್ನುವುದಾದರೆ ಯಾವ್ಯಾವ  ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು? ಎಂಬ ಬಗ್ಗೆ ಚರ್ಚೆ ನಡೆಸಲಾಗುತ್ತದೆ.


ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಆಯುಕ್ತರಿಂದ ಪ್ರತ್ಯೇಕವಾಗಿ ಮಾಹಿತಿ ಸಂಗ್ರಹಿಸಿ ಅಂತಿಮವಾಗಿ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಬೇಕೋ ಬೇಡವೋ ಎಂಬ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದೆ.


ಇದನ್ನೂ ಓದಿ - SSLC ಮತ್ತು PUC ವಿದ್ಯಾರ್ಥಿಗಳೇ ಗಮನಿಸಿ..!


ಈ ಹಿಂದೆ ಮೇ 24 ರಿಂದ ಜೂನ್ 9 ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿತ್ತು. ಅಲ್ಲದೆ ಜೂನ್ 21 ರಿಂದ ಜುಲೈ 5 ರವರೆಗೆ SSLC ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೀಗ ದೇಶಾದ್ಯಂತ ಕೊರೋನಾ ತೀವ್ರವಾಗಿ ಹರಡುತ್ತಿರುವುದರಿಂದ ಈಗಾಗಲೇ CBSE ‌ಕೇಂದ್ರೀಯ ಪರೀಕ್ಷೆಗಳು ರದ್ದಾಗಿವೆ. ರಾಜ್ಯದಲ್ಲಿ ಬೋರ್ಡ್ ಪರೀಕ್ಷೆ ವಿಚಾರವಾಗಿ ಇನ್ನು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.