ಹರ್ ಘರ್ ತಿರಂಗಾ ಅಭಿಯಾನಕ್ಕೆ ರಾಜ್ಯ ನಾಯಕರ ಬೆಂಬಲ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.

Written by - Bhavishya Shetty | Last Updated : Aug 13, 2022, 12:27 PM IST
    • ಪ್ರತಿ ಮನೆಯಲ್ಲೂ ತಿರಂಗ ಹಾರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ
    • ತ್ರಿವರ್ಣ ಧ್ವಜವನ್ನು ಹಿಡಿದುಕೊಳ್ಳುವ ಮೂಲಕ ಕರೆಗೆ ಬೆಂಬಲ ಸೂಚನೆ
    • ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಯಲ್ಲೂ ರಾರಾಜಿಸಿದ ತಿರಂಗ
ಹರ್ ಘರ್ ತಿರಂಗಾ ಅಭಿಯಾನಕ್ಕೆ ರಾಜ್ಯ ನಾಯಕರ ಬೆಂಬಲ  title=
Har Ghar Tiranga

ಬೆಂಗಳೂರು: ಇಂದಿನಿಂದ ದೇಶದ ಪ್ರತೀ ಮೂಲೆಯಲ್ಲಿ ಭಾರತ ಧ್ವಜ ಹಾರಾಡಲಿದೆ. ಹರ್ ಘರ್ ತಿರಂಗ ಅಡಿಯಲ್ಲಿ ಪ್ರತಿ ಮನೆಯಲ್ಲೂ ತಿರಂಗ ಹಾರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ನಾಯಕರು ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಕರೆಗೆ ಬೆಂಬಲ ಸೂಚಿಸಿದ್ದಾರೆ. 

ಇದನ್ನೂ ಓದಿ: ಭಾರತಕ್ಕೆ ಲಗ್ಗೆ ಇಟ್ಟ ಈ ‘ಬೈಕ್’: ಇದರ ವಿಶೇಷತೆ ಕೇಳಿದ್ರೆ ಇಂದೇ ಬುಕ್ ಮಾಡಿಕೊಳ್ಳೋದು ಪಕ್ಕಾ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ,  ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಅಬಕಾರಿ ಸಚಿವ ಕೆ  ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ, ರಾ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅಪ್ಪರ್ ಮುಖ್ಯ ಕಾರ್ಯದರ್ಶಿ ಡಾಕ್ಟರ್ ರಜನೀಶ್ ಗೋಯಲ್, ಡಾ. ಶಾಲಿನಿ ರಜನೀಶ ಮತ್ತು ಇತರರು ಉಪಸ್ಥಿತರಿದ್ದರು.

ಇನ್ನೊಂದೆಡೆ ಹರ್ ಘರ್ ತಿರಂಗಾ ಅಭಿಯಾನ ಆರಂಭ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. “ಇಂದಿನಿಂದ ಪ್ರಧಾನಿ ಮೋದಿಯವರು ತಿರಂಗಾ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಈಗಾಗಲೇ ಒಂದು ಕೋಟಿ ಧ್ವಜ ಮಾರಾಟವಾಗಿವೆ. ರಾಷ್ಟ್ರ ಧ್ವಜದ ಮಹತ್ವವನ್ನು ಉಕ್ರೇನ್ ಯುದ್ದದ ಸಂದರ್ಭದಲ್ಲಿ ಭಾರತದ ವಿದ್ಯಾರ್ಥಿಗಳು ಸಾರಿದ್ದಾರೆ. ಇನ್ನೂ ಯಾರು ಧ್ವಜ ಹಾರಿಸಿಲ್ಲ ಇಂದಿನಿಂದ ತಮ್ಮ ಮನೆಗಳ ಮುಂದೆ ಹಾರಿಸಿ” ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಅವರ ಲಂಚ ಮಂಚ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಇದು ಅವರ ಕೀಳು ಅಭಿರುಚಿ ತೋರಿಸುತ್ತಿದೆ. ಅವರು ಇಡೀ ಮಹಿಳಾ ಕುಲಕ್ಕೆ ಅಪಮಾನ‌ ಮಾಡಿದ್ದಾರೆ. ಯಾವ ಮಹಿಳೆಯೂ ಈ ಹೇಳಿಕೆಯನ್ನ ಸಹಿಸುವುದಿಲ್ಲ. ಮಹಿಳಾ ಸಮುದಾಯಕ್ಕೆ ಅವರು ಕ್ಷಮೆ ಕೇಳಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಕಷ್ಟು ಭ್ರಷ್ಟಾಚಾರವಾಗಿದೆ. ಮಲ್ಲಿಕಾರ್ಜುನ್ ಖರ್ಗೆ ಕೇಂದ್ರದ ಸಚಿವರಾಗಿದ್ದಾಗ ಅನೇಕ ವಿಷಯಗಳಲ್ಲಿ ಭ್ರಷ್ಟಾಚಾರವಾಗಿದೆ. ಅವರಿಗೆ ನಾಚಿಕೆ ಮಾನ ಮರ್ಯಾದೆ ಇದ್ದಿದ್ರೆ ಭ್ರಷ್ಟಾಚಾರದ ಬಗ್ಗೆ ಮಾತನಾಡಬಾರದು” ಎಂದು ವಾಗ್ದಾಳಿ ನಡೆಸಿದರು. 

ಇದನ್ನೂ ಓದಿ: BiggBoss OTT: ಸಾನಿಯಾ ಬೆನ್ನುಬಿಡುತ್ತಿಲ್ಲ ರೂಪೇಶ್! ಬಿಗ್ ಮನೆಯಲ್ಲಿ ಮತ್ತೊಂದು ಪ್ರೇಮಪುರಾಣ?

ಈ ಬಳಿಕ ಹೊಸ ಸಂಸತ್ ನಿರ್ಮಾಣ ವಿಚಾರವಾಗಿ ಮಾತನಾಡಿದ ಅವರು “ಮುಂದಿನ‌ ನೂರು ವರ್ಷಕ್ಕೆ ಸಂಸತ್ ಯಾವ ರೀತಿ ಇರಬೇಕು ಎಂಬ ಚಿಂತನೆಯಲ್ಲಿ ಸಂಸತ್ ನಿರ್ಮಾಣ ಮಾಡಲಾಗಿದೆ. ಜಗತ್ತಿನಲ್ಲೇ ಈ ರೀತಿಯ ಕಟ್ಟಡ ಎಲ್ಲಿಯೂ ನಿರ್ಮಾಣ ಮಾಡಿಲ್ಲ. ಜಗತ್ತಿಗೆ ಒಂದು ಉತ್ತಮ ನಿದರ್ಶನ ಈ ಸಂಸತ್” ಎಂದು ಹೊಗಳಿದರು. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News