ಎನ್ ವೈ ಹನುಮಂತಪ್ಪ ಮತ್ತು ಸುಜಾತಮ್ಮ ಅವರಿಗೆ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

 Maharishi Valmiki Award: ಬಳ್ಳಾರಿಯ ಮಾಜಿ ಸಂಸದರು ಹಾಗೂ ಹೈ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಎನ್ ವೈ ಹನುಮಂತಪ್ಪ ಮತ್ತು ಬಳ್ಳಾರಿಯ ಬಯಲಾಟ ಮತ್ತು ರಂಗಭೂಮಿ ಕಲಾವಿದೆ ಸುಜಾತಮ್ಮ ಅವರಿಗೆ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. 

Written by - Savita M B | Last Updated : Oct 27, 2023, 06:29 PM IST
  • ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ.
  • ಹೈ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಎನ್ ವೈ ಹನುಮಂತಪ್ಪ ಆಯ್ಕೆ
  • ಬಳ್ಳಾರಿಯ ಬಯಲಾಟ ಮತ್ತು ರಂಗಭೂಮಿ ಕಲಾವಿದೆ ಸುಜಾತಮ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ
ಎನ್ ವೈ ಹನುಮಂತಪ್ಪ ಮತ್ತು ಸುಜಾತಮ್ಮ ಅವರಿಗೆ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ title=

State Level Maharishi Valmiki Award: ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾದ ಪ್ರತಿ ಸಾಧಕರಿಗೆ ಐದು ಲಕ್ಷ ರೂಪಾಯಿ ನಗದು 20ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಿದ್ದಾರೆ. ಎನ್ ವೈ ಹನುಮಂತಪ್ಪ ಅವರು ಬಳ್ಳಾರಿಯ ಮಾಜಿ ಸಂಸದರು ಹಾಗೂ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾಗಿ ನಿವೃತ್ತಿ ಹೊಂದಿದ್ದಾರೆ. 

ಪ್ರಾಥಮಿಕ ಶಿಕ್ಷಣವನ್ನು ಚಿತ್ರದುರ್ಗ ಹಾಗೂ ಬಳ್ಳಾರಿಯಲ್ಲಿ ಪೂರ್ಣಗೊಳಿಸಿದರು. ಬೆಂಗಳೂರಿನ ಎಸ್ ಜೆ ಆರ್ ಸಿ ಲಾ ಕಾಲೇಜಿನಲ್ಲಿ ಪದವಿ ಪಡೆದು, ಕರ್ನಾಟಕ ಹೈಕೋರ್ಟಿನ, ಆಂಧ್ರಪ್ರದೇಶದ ಹೈಕೋರ್ಟ್,  ಒರಿಸ್ಸಾ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. 

ಇದನ್ನೂ ಓದಿ-ಹುಲಿ ಉಗುರು ಯಾಕೆ ಧರಿಸುತ್ತಾರೆ ಗೊತ್ತಾ..? ಇಲ್ಲಿದೆ ಸಂಪೂರ್ಣ ಮಾಹಿತಿ

ಅನೇಕ ಐತಿಹಾಸಿಕ ತೀರ್ಪುಗಳನ್ನು ನೀಡಿ ಗಣನೀಯವಾಗಿ ಸಮಾಜ ಸೇವೆ ಸಲ್ಲಿಸಿದ್ದಾರೆ. ಸುಜಾತಮ್ಮ ಬಯಲಾಟ ಮತ್ತು ರಂಗಭೂಮಿ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಾರೆ. ಸುಜಾತಮ್ಮ ಅವರು ಮೂಲತಃ ಬಳ್ಳಾರಿ ಜಿಲ್ಲೆಯವರಾಗಿದ್ದು, ಹಲವು ಬಯಲಾಟ ಪ್ರದರ್ಶನಗಳನ್ನು ನೀಡುತ್ತಾ ಹಲವಾರು ಮೈಲಿಗಲ್ಲು ಸಾಧನೆ ಮಾಡಿದ್ದಾರೆ.

2008ರಲ್ಲಿ ಕಿತ್ತೂರು ರಾಣಿ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡಮಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅನೇಕ ಬಯಲಾಟ ಹಾಗೂ ನಾಟಕಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ-ಕಂಠಪೂರ್ತಿ ಕುಡಿದು ಫ್ಯಾಶನ್ ಡಿಸೈನರ್ ಪುತ್ರನ ರಂಪಾಟ : ಪೊಲೀಸರಿಗೆ ಆ್ಯಡಂ‌ ಬಿದ್ದಪ್ಪ ಅವಾಜ್ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Tiger Claw PendantTiger Claw Pendant Casebigg boss kannada 10

Trending News