ಹಂಪಿಯಲ್ಲಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರ ಪ್ರಾರಂಭ: ಸಚಿವ ಬಿ.ನಾಗೇಂದ್ರ

ಹಂಪಿಯಲ್ಲಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.

Written by - Manjunath N | Last Updated : Dec 1, 2023, 09:35 PM IST
  • ಕಲಿಕೆ ಒಂದೇ ಮಾರ್ಗವಲ್ಲ, ಬದಲಾಗಿ ಅನೇಕ ರಂಗಗಳಲ್ಲಿ ಯುವಕರು ತಮ್ಮನ್ನು ತಾವು ತೊಡಗಿಸಿಕೊಂಡು ಮುನ್ನಡೆಯಬೇಕು
  • ಪ್ರತಿಯೊಬ್ಬ ಯುವಕ-ಯುವತಿಯರಲ್ಲಿ ವಿಭಿನ್ನ ಹಾಗೂ ವಿಶಿಷ್ಟವಾದ ಪ್ರತಿಭೆಯನ್ನು ಹೊಂದಿರುತ್ತಾರೆ
  • ಸಂಕಲ್ಪ ಇಟ್ಟುಕೊಂಡು ಗುರಿ ತಲುಪಿದರೆ, ಯಶಸ್ಸು ನಿಮ್ಮದಾಗುತ್ತದೆ ಎಂದು ಕಿವಿಮಾತು ಹೇಳಿದರು
 ಹಂಪಿಯಲ್ಲಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರ ಪ್ರಾರಂಭ: ಸಚಿವ ಬಿ.ನಾಗೇಂದ್ರ title=

ಬಳ್ಳಾರಿ: ಹಂಪಿಯಲ್ಲಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಸಂಘಗಳ ಒಕ್ಕೂಟ, ವಿವೇಕಾನಂದ ಯುವಕ ಸಂಘ ಹಾಗೂ ಸ್ಥಳೀಯ ಯುವಕ ಸಂಘಗಳ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಪುಟ್‌ಬಾಲ್ ಮೈದಾನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ-2023 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಸಬಲೀಕರಣ ಇಲಾಖೆಯಿಂದ ಯುವಜನರನ್ನು ಪ್ರೋತ್ಸಾಹಿಸಲು ಮತ್ತು ಅವರ ಅಧಿವೃದ್ಧಿಗಾಗಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರ ಸ್ಥಾಪನೆಗೆ ಬೇಕಾದ 20 ಎಕರೆ ಜಾಗವನ್ನು ಹಂಪಿ ಅಥವಾ ಬಳ್ಳಾರಿ ಭಾಗದಲ್ಲಿ ಗುರುತಿಸಲಾಗುವುದು ಎಂದು ತಿಳಿಸಿದ ಸಚಿವರು, ಅದೇ ರೀತಿಯಾಗಿ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಬಳ್ಳಾರಿಯಲ್ಲಿ ಹಮ್ಮಿಕೊಳ್ಳಲು ಇಚ್ಛಾಶಕ್ತಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ನುಡಿದರು. ಸಚಿವರು ನುಡಿದರು.

ಇದನ್ನೂ ಓದಿ: 46 ತಾಲೂಕುಗಳಲ್ಲಿ ಹೊಸದಾಗಿ ಡಯಾಲಿಸಿಸ್ ಕೇಂದ್ರಗಳ ಸ್ಥಾಪನೆ

ಕಲಿಕೆ ಒಂದೇ ಮಾರ್ಗವಲ್ಲ, ಬದಲಾಗಿ ಅನೇಕ ರಂಗಗಳಲ್ಲಿ ಯುವಕರು ತಮ್ಮನ್ನು ತಾವು ತೊಡಗಿಸಿಕೊಂಡು ಮುನ್ನಡೆಯಬೇಕು. ಪ್ರತಿಯೊಬ್ಬ ಯುವಕ-ಯುವತಿಯರಲ್ಲಿ ವಿಭಿನ್ನ ಹಾಗೂ ವಿಶಿಷ್ಟವಾದ ಪ್ರತಿಭೆಯನ್ನು ಹೊಂದಿರುತ್ತಾರೆ. ಸಂಕಲ್ಪ ಇಟ್ಟುಕೊಂಡು ಗುರಿ ತಲುಪಿದರೆ, ಯಶಸ್ಸು ನಿಮ್ಮದಾಗುತ್ತದೆ ಎಂದು ಕಿವಿಮಾತು ಹೇಳಿದರು.

ಕುಟುಂಬ ಹಿನ್ನಲೆಯಲ್ಲಿ ಅನೇಕ ಸಮಸ್ಯೆಗಳಿದ್ದರೂ, ಯುವಜನ ತಮ್ಮ ಗುರಿಯನ್ನು ತಲುಪಲು ಛಲ ಬಿಡದೆ, ತಮ್ಮ ಕನಸುಗಳನ್ನು ಕಟ್ಟಿಕೊಳ್ಳುವ ಕೆಲಸ ಮಾಡಬೇಕು. ಯುವಕರಲ್ಲಿ ಮುಖ್ಯವಾಗಿ ಒಳ್ಳೆಯ ಗುಣ ಮತ್ತು ಸಂಸ್ಕೃತಿ ಅಳವಡಿಸಿಕೊಂಡಾಗ ಮಾತ್ರ ಎಲ್ಲವನ್ನೂ ಪಡೆಯಲು ಸಾಧ್ಯ ಎಂದು ವಿಶ್ವಾಸ ಮೂಡಿಸಿದರು.

18 ವರ್ಷ ತುಂಬಿದರೆ ಯುವಕ ಯುವತಿಯರಿಗೆ ಮತ ಚಲಾಯಿಸುವ ಹಕ್ಕು ಬರುತ್ತದೆ, ಇದರಿಂದ ಉತ್ತಮ ನಾಯಕರನ್ನು ಆರಿಸುವ ಚಿಂತನೆ ಮೂಡುತ್ತದೆ. ಅದೇರೀತಿಯಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 371-ಜೆ ಅಡಿಯಲ್ಲಿ ಯುವಕ ಯುವತಿಯರು ಸರ್ಕಾರದ ಸೌಲಭ್ಯ ಪಡೆದುಕೊಂಡು ಶೈಕ್ಷಣಿಕವಾಗಿ ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಪೋಷಕರ ವಿಶ್ವಾಸಕ್ಕೆ ಅಗೌರವ ತರಬಾರದು. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯವು ಮೊಬೈಲ್ ಗೀಳಿನಲ್ಲಿ ಬೀಳಬಾರದು. ಅದರಿಂದ ಒಳಿತಾಗುವ ಉಪಯುಕ್ತ ಮಾಹಿತಿಯನ್ನು ಮಾತ್ರ ಬಳಸಿಕೊಳ್ಳಬೇಕು. ಯುವಕರು ಜೀವನದಲ್ಲಿ ಒಳ್ಳೆಯ ದಾರಿಯನ್ನು ಆಯ್ದುಕೊಳ್ಳಬೇಕು ಎಂದು ಎಚ್ಚರಿಸಿದರು.

ಯುವಸಮುದಾಯವು ಮುಖ್ಯವಾಗಿ ಮಾದಕ ವಸ್ತುಗಳಿಂದ ದೂರವಿರಬೇಕು. ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆ ಹುಕ್ಕಾ ಬಾರ್ ನಿಷೇಧ, ಬೀಡಿ ಸಿಗರೇಟ್ ಸೇವನೆ ನಿರ್ಬಂಧ ಹಾಗೂ ಶಾಲೆ ಕಾಲೇಜುಗಳ ಸುತ್ತ ಮುತ್ತ ಮಾರಾಟ ಮತ್ತು ನಿಷೇಧದ ಕುರಿತು ಚರ್ಚಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: ICC T20 World Cup 2023: ಟಿ20 ವಿಶ್ವಕಪ್‍ಗೆ ಹೊಸ ಸ್ವರೂಪ, 20 ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ   

ಯುವಕರು, ತಮ್ಮಲ್ಲಿನ ಕಲೆ ಮತ್ತು ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವದಂತಹ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ಯುವಕ-ಯುವತಿಯರು ಅವುಗಳನ್ನು ಬಳಸಿಕೊಂಡು ತಮ್ಮ ಕಲೆಗಳ ಪ್ರದರ್ಶನ ನೀಡಬೇಕು ಎಂದು ಕರೆ ನೀಡಿದರು.

ನಂತರದಲ್ಲಿ ವಿವಿಧ ಶಾಲಾ - ಕಾಲೇಜು ವಿದ್ಯಾರ್ಥಿಗಳಿಂದ ಜಾನಪದ ನೃತ್ಯ, ಕಥೆ ಬರೆಯುವುದು, ಪೋಸ್ಟರ್ ಮೇಕಿಂಗ್, ಘೋಷಣೆ, ಛಾಯಾಗ್ರಹಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಕ್ರಮವಾಗಿ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪಮೇಯರ್ ಬಿ.ಜಾನಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ, ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು, ಯುವಕರು ಹಾಗೂ ಮತ್ತಿತರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News