ಕೇಂದ್ರ ವಖ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ವಖ್ಫ್ ಬೋರ್ಡ್ ವಿರೋಧ : ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ನಿರ್ಣಯ

ಕೇಂದ್ರ ವಖ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ವಖ್ಫ್ ಬೋರ್ಡ್ ವಿರೋಧ ವ್ಯಕ್ತಪಡಿಸಿದೆ. ಯಾವುದೇ ಕಾರಣಕ್ಕೂ ಕೇಂದ್ರದ ನಿರ್ಧಾರ ಒಪ್ಪುವುದಿಲ್ಲ ಎಂದು ನಿರ್ಣಯ ತೆಗೆದುಕೊಂಡಿದೆ.    

Written by - Ranjitha R K | Last Updated : Aug 29, 2024, 03:44 PM IST
  • ಕೇಂದ್ರದ ಉದ್ದೇಶಿತ ವಖ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಖ್ಫ್ ಬೋರ್ಡ್ ವಿರೋಧ
  • ವಖ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆಗೆ ವಿರೋಧ
  • ಸಿದ್ದರಾಮಯ್ಯ ಅವರಿಗೆ ಈ ಕುರಿತು ನಿರ್ಣಯ ಪ್ರತಿ
ಕೇಂದ್ರ ವಖ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ವಖ್ಫ್ ಬೋರ್ಡ್ ವಿರೋಧ : ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ನಿರ್ಣಯ title=

ಬೆಂಗಳೂರು : ಕೇಂದ್ರದ ಉದ್ದೇಶಿತ ವಖ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಖ್ಫ್ ಬೋರ್ಡ್ ವಿರೋಧ ವ್ಯಕ್ತ ಪಡಿಸಿದೆ.ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ರಾಜ್ಯ ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ನೇತೃತ್ವದಲ್ಲಿ ನಡೆದ ವಖ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆಗೆ ವಿರೋಧ ಪಡಿಸಿ ನಿರ್ಣಯ ಕೈಗೊಳ್ಳಲಾಯಿತು.

ನಂತರ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಕುರಿತು ನಿರ್ಣಯ ಪ್ರತಿ ನೀಡಿ ಕೇಂದ್ರಕ್ಕೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಪತ್ರ ಬರೆಯಲು ಮನವಿ ಮಾಡಿತು.

ಇದನ್ನೂ ಓದಿ : ನಟ ದರ್ಶನ್‌ಗೆ ಬಳ್ಳಾರಿ ಜೈಲ್ ಸೇಫ್ ಅಲ್ಲ...! ನಟೋರಿಯಸ್ ಕಳ್ಳ ಶಿಗ್ಲಿ ಬಸ್ಯಾ

ಕೇಂದ್ರ ಸರ್ಕಾರ ರಚನೆ ಮಾಡಿರುವ ಜಂಟಿ ಸಲಹಾ ಸಮಿತಿಗೂ ಯಾವುದೇ ರೀತಿಯ ಮಾಹಿತಿ ಕೊಡುವುದಿಲ್ಲ.ನಮ್ಮದು ಸ್ವಾಯತ್ತ ಸಂಸ್ಥೆಯಾಗಿದ್ದು,ಉದ್ದೇಶಿತ ತಿದ್ದುಪಡಿ ಕಾಯ್ದೆ ಸಮುದಾಯದ ಹಿತಾಸಕ್ತಿಗೆ ವಿರುದ್ದವಾಗಿದೆ.ಇದರ ಹಿಂದಿನ ಉದ್ದೇಶ ಬೇರೆ ಇದೆ ಎಂದು ವಖ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆ ಅಭಿಪ್ರಾಯ ಪಟ್ಟಿದ್ದನ್ನು ಮುಖ್ಯಮಂತ್ರಿ ಯವರ ಗಮನಕ್ಕೆ ತರಲಾಯಿತು.ಮುಂದಿನ ಅಧಿವೇಶನ ದಲ್ಲಿ ರಾಜ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಕೋರಲಾಯಿತು.

ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಸದಸ್ಯರಾದ ಮೌಲನಾ ಶಾಫಿ ಸಾದಿ, ಜಿ . ಯಾಕೂಬ್, ಅಡ್ವೋಕೆಟ್ ರಿಯಾಜ್, ಅಡ್ವೋಕೆಟ್ ಅಸೀಫ್ ಅಲಿ, ಮೌಲಾನಾ ಅಜರ್ ಅಭಿದಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಪೊಲೀಸರಿಂದ ಚಿಕ್ಕಣ್ಣ ವಿಚಾರಣೆ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News