ಬೆಂಗಳೂರು: ಇಂದಿನ ಫಲಿತಾಂಶ, ರಾಜ್ಯ ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದ, ಐದು ಗ್ಯಾರಂಟಿ ಅನುಷ್ಠಾನ ಮೂಲಕ ನುಡಿದಂತೆ ನಡೆದ ಸರ್ಕಾರಕ್ಕೆ ಜನರು ನೀಡಿದ ಆಶೀರ್ವಾದ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಈ ಫೋಟೋಗಳನ್ನು ನೋಡಿರಬಹುದು ಆದರೆ ಈ ಫೋಟೋಗಳ ಹಿಂದಿನ ಕಥೆ ನಿಮಗೆಂದು ತಿಳಿದಿರಲು ಸಾಧ್ಯವಿಲ್ಲ..!


ಈ ಕುರಿತು ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿರಂತರ ಅಪಪ್ರಚಾರ ಮಾಡಿ ಸರ್ಕಾರದ ಅಭಿವೃದ್ಧಿ ಕೆಲಸ ಮರೆಮಾಚಿ ಜನರ ದಿಕ್ಕು ತಪ್ಪಿಸಲು ಬಿಜೆಪಿ-ಜೆಡಿಎಸ್ ಕುತಂತ್ರಕ್ಕೆ ಮತದಾರ ಸೂಕ್ತ ಉತ್ತರ ನೀಡಿದ್ದಾರೆ ಎಂದು ಹೇಳಿದರು.


ಮೂಡಾ, ವಕ್ಫ್‌, ಚನ್ನಪಟ್ಟಣ ದಲ್ಲಿನಾನು ನೀಡಿದ ಹೇಳಿಕೆ ವಿವಾದ ಮಾಡಿ ರಾಜಕೀಯ ಲಾಭಕ್ಕೆ ಯತ್ನಿಸಿದವರಿಗೆ ತಕ್ಕ ಶಾಸ್ತಿ ಆಗಿದೆ ಎಂದಿದ್ದಾರೆ.


ಅಹಿಂದ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ಮಾಡಿದ ಆರೋಪಗಳನ್ನು ರಾಜ್ಯದ ಜನತೆ ಸಹಿಸುವುದಿಲ್ಲ ಎಂಬುದಕ್ಕೆ ಫಲಿತಾಂಶವೇ ಸಾಕ್ಷಿ. ಈ ಉಪಚುನಾವಣೆಯಲ್ಲೂ ಮುಸ್ಲಿಂ ಸಮುದಾಯ ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್ ಕೈ ಹಿಡಿದು ಬಲಪಡಿಸಿದೆ. ಕಾಂಗ್ರೆಸ್ ಸರ್ಕಾರದ ಪರ ವಿಶ್ವಾಸ ತೋರಿಸಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮಧುಮೇಹಿಗಳು ಒಂದು ಗ್ಲಾಸ್‌ ನೀರಿಗೆ ಈ ಪುಡಿ ಬೆರೆಸಿ ಕುಡಿದರೆ ಜನ್ಮದಲ್ಲೇ ಹೆಚ್ಚಾಗಲ್ಲ ಬ್ಲಡ್‌ ಶುಗರ್!‌


ಪ್ರತಿಪಕ್ಷಗಳು ಇನ್ನು ಮುಂದೆಯಾದರೂ ನಮ್ಮ ಅಭಿವೃದ್ದಿಗೆ ಕೈ ಜೋಡಿಸಲಿ. ನಕಾರಾತ್ಮಕ ರಾಜಕಾರಣ ಕೈಬಿಡಲಿ. ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.