ಬೆಂಗಳೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು, ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ‌ ಪ್ರಯಾಣ ನೀಡುವುದು ಸರಿಯಲ್ಲ, ಇದರಿಂದ METRO ಕುತ್ತು ಬರುತ್ತದೆ ಎಂಬ ಹೇಳಿಕೆ ನೀಡಿದ್ದರು. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅಸಮಾಧಾನ ಹೊರಹಾಕಿದ್ದಾರೆ.


COMMERCIAL BREAK
SCROLL TO CONTINUE READING

ಶಕ್ತಿ ಯೋಜನೆಯನ್ನು ಜೂನ್ 11, 2023 ರಿಂದ ರಾಜ್ಯದಲ್ಲಿ ಜಾರಿಗೆ ತರಲಾಯಿತು. ಇಂದಿನವರೆಗೆ ಅಂದರೆ ಮೇ 20, 2024 ರವರೆಗೆ ಶಕ್ತಿ ಯೋಜನೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 67.34 ಕೋಟಿ. ಕಳೆದ ಒಂದು ವರ್ಷದಲ್ಲಿ ನಮ್ಮ METRO ಪ್ರಯಾಣಿಕರ ಸಂಖ್ಯೆ ಶೇ.30 ಏರಿಕೆ ಕಂಡಿದೆ. ಜನವರಿ‌ 2023 ರಲ್ಲಿ ಮೆಟ್ರೋ‌ ಪ್ರಯಾಣಿಕರ ಸಂಖ್ಯೆ 1.65 ಕೋಟಿ,‌ ಆದಾಯ  39.15 ಕೋಟಿಯಾಗಿತ್ತು. ಅದೇ ಏಪ್ರಿಲ್ 2024 ರಲ್ಲಿ ಪ್ರಯಾಣಿಕರ ಸಂಖ್ಯೆ 2 ಕೋಟಿಗೆ ಏರಿಕೆಯಾಗಿದ್ದು, ಆದಾಯ ರೂ. 51.71 ಕೋಟಿಗೆ ಏರಿಕೆಯಾಗಿದೆ” ಎಂದು ಅಂಕಿಅಂಶ ಸಹಿತ ಸ್ಪಷ್ಟನೆ ನೀಡಿದ್ದಾರೆ.


ಇದನ್ನೂ ಓದಿ: ಅಂದು ಒಂದೇ ಒಂದು ಅವಕಾಶಕ್ಕಾಗಿ ಅಂಗಲಾಚುತ್ತಿದ್ದ... ಇಂದು ಈತನೇ RCBಗೆ ಅದೃಷ್ಟ! ಈತ ತಂಡಕ್ಕೆ ಕಾಲಿಟ್ಟ ಮೇಲೆ ಸೋತೇ ಇಲ್ಲ Bengaluru


“2023 ಕ್ಕೆ ಹೋಲಿಸಿದರೆ 2024 ರಲ್ಲಿ ಒಂದು ತಿಂಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಸರಾಸರಿ 35 ಲಕ್ಷ  ಏರಿಕೆ ಮತ್ತು ಆದಾಯದಲ್ಲಿ ರೂ. 1.10 ಕೋಟಿ ಏರಿಕೆ ಕಂಡಿದೆ. ಈ ಮೇಲಿನ ಅಂಕಿಅಂಶಗಳಿಂದ ಶಕ್ತಿ ಯೋಜನೆಯಿಂದ METROಗೆ ಯಾವ ರೀತಿಯಿಂದಲೂ ಧಕ್ಕೆ‌ ಆಗಿಲ್ಲ. ಬದಲಿಗೆ ಮೆಟ್ರೋ ಪ್ರಯಾಣಿಕರ ಸಂಖ್ಯೆ‌ ಮತ್ತು ಆದಾಯದಲ್ಲಿ ಗಣನೀಯ ಹೆಚ್ಚಳವಾಗಿರುವುದು ಕಂಡುಬರುತ್ತದೆ” ಎಂದಿದ್ದಾರೆ.


“ಇದೀಗ ಉಚಿತ ಪ್ರಯಾಣ ಯೋಜನೆಯಿಂದ ಮೆಟ್ರೋಗೆ ಹೇಗೆ ಧಕ್ಕೆಯಾಗಿದೆ ಎಂಬುದನ್ನು ಪ್ರಧಾನಿಗಳು ವಿವರಿಸಬೇಕು. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಹಾಗೂ ಅತ್ಯಂತ ಯಶಸ್ವಿಯಾಗಿ‌ ಜಾರಿಯಾಗಿರುವ ಶಕ್ತಿ ಯೋಜನೆಯನ್ನು ದೂಷಿಸುವ ಇರಾದೆಯೇ ? ಅಥವಾ ಮಾಹಿತಿ ಕೊರತೆಯೋ? ತಿಳಿಯದಾಗಿದೆ” ಎಂದು ಕಿಡಿಕಾರಿದರು.


“ಶಕ್ತಿ‌ಯೋಜನೆ ನಂತರ ಒಟ್ಟು ಪ್ರಯಾಣಿಕರ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ಸಾರ್ವಜನಿಕ ಸಾರಿಗೆಯನ್ನು ಬಲಪಡಿಸುವ ಹಾಗೂ ಮಹಿಳೆಯರ ಸಬಲೀಕರಣ ಮಹತ್ವದ ಯೋಜನೆಯನ್ನು ಪ್ರಧಾನಮಂತ್ರಿ ಈ ರೀತಿಯಾಗಿ ಟೀಕಿಸುವುದು ಸಾಧುವಲ್ಲ. ರಾಜ್ಯದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಬಲಿಷ್ಠವಾಗುತ್ತಿವೆ. ಹೊಸ ಹೊಸ ಬಸ್ಸುಗಳ ಸೇರ್ಪಡೆ, ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ಹಾಗೂ ದೇಶ ವಿದೇಶಗಳ ಮಾಧ್ಯಮಗಳಲ್ಲಿಯೂ ಈ‌  ಯೋಜನೆ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ಲಭ್ಯವಾಗಿರುವುದು ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಒಟ್ಟಾರೆಯಾಗಿ ಶಕ್ತಿ ಯೋಜನೆಯು  ಪರಿಣಾಮಕಾರಿಯಾಗಿ ಜಾರಿಯಾಗಿ ಸಫಲತೆಯನ್ನು ಕಂಡಿದೆ. ಪ್ರಧಾನಿ ಪೂರ್ವಾಗ್ರಹ ಪೀಡಿತರಾಗಿ ಯೋಜನೆಯನ್ನು ದೂಷಿಸುವುದು ಸಮಂಜಸವಲ್ಲ” ಎಂದರು.


ಇದನ್ನೂ ಓದಿ: ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದು


“ಕೇವಲ ಬಿಜೆಪಿ ಘೋಷಿಸುವ ಯೋಜನೆಗಳು ಮಾತ್ರ ಒಳ್ಳೆಯದು ಎಂಬ ಭ್ರಮೆ ಜನರಲ್ಲಿ ಮೂಡಿಸುವಲ್ಲಿ ಮೋದಿಯವರು ಪ್ರಯತ್ನಿಸುತ್ತಿದ್ದಾರೆ. ಆದರೆ ಜನರಿಗೆ ಎಲ್ಲಾ ಮಾಹಿತಿಯು ತಿಳಿದಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು. ನಂತರ ಎಲ್ಲಾ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಮರೆತು ಜನರ ಅನುಕೂಲಕ್ಕಾಗಿ ಸರ್ಕಾರಗಳು ಶ್ರಮಿಸಬೇಕು” ಎಂದು ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews