ರಾಜ್ಯಾದ್ಯಂತ ಮಾರ್ಚ್ 3ರಿಂದ 6ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Pulse Polio Vaccination Program: ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅನುಷ್ಠಾನದ ಕುರಿತು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ರಾಜ್ಯಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Written by - Prashobh Devanahalli | Edited by - Bhavishya Shetty | Last Updated : Feb 26, 2024, 05:06 PM IST
    • ರಾಜ್ಯಾದ್ಯಂತ ಮಾರ್ಚ್ 3 ರಿಂದ 6ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    • ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ. ಶಾಲಿನಿ ರಜನೀಶ್ ಮಾಹಿತಿ
    • ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿಕೆ
ರಾಜ್ಯಾದ್ಯಂತ ಮಾರ್ಚ್ 3ರಿಂದ 6ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ title=
Pulse Polio

Pulse Polio Vaccination Program: ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 3 ರಿಂದ 6ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 5 ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತವಾಗಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ. ಶಾಲಿನಿ ರಜನೀಶ್ ಸೂಚಿಸಿದ್ದಾರೆ.

ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅನುಷ್ಠಾನದ ಕುರಿತು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ರಾಜ್ಯಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: ಇನ್ಮುಂದೆ ಕೇವಲ 500 ರೂ.ಗೆ ಗ್ಯಾಸ್ ಸಿಲಿಂಡರ್… ಫಲಾನುಭವಿಗಳಾಗಲು ಈ ಪ್ರಕ್ರಿಯೆ ಕಡ್ಡಾಯ!

ಕಳೆದ ಬಾರಿ ಯಾವ ಪ್ರದೇಶದಲ್ಲಿ ಯಾವ ಕಾರಣಕ್ಕೆ ಪಲ್ಸ್ ಪೋಲಿಯೋ ಲಸಿಕೆ ಅನುಷ್ಠಾನದಲ್ಲಿ ಕಡಿಮೆ ಪ್ರಗತಿ ನಡೆದಿದೆ ಎಂದು ಗುರುತಿಸಿ. ಅಂತಹ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ಕಾರಣ ಪತ್ತೆ ಹಚ್ಚಿ, ಸೂಕ್ತ ಮೂಲಸೌಕರ್ಯ ಒದಗಿಸುವ ಜೊತೆಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.

ಆರೋಗ್ಯ ಇಲಾಖೆಯ ರಾಜ್ಯ, ಜಿಲ್ಲಾ ಮತ್ತು ತಾಲೂಈ ಮಟ್ಟದ ಅಧಿಕಾರಿಗಳು, ಸಂಬಂಧಿಸಿದ ಸರ್ಕಾರದ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಆರೋಗ್ಯ ಕ್ಷೇತ್ರ ಸೇರಿದಂತೆ ಇತರೆ ಪೂರಕ ಸಂಘಸಂಸ್ಥೆಗಳ ಸಹಕಾರ ಪಡೆದು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಸಮರ್ಪಕ ಮೂಲಭೂತ ಸೌಕರ್ಯಗಳ ಬಳಕೆಯಿಂದ ಸಿಬ್ಬಂದಿಗಳ ಕಾರ್ಯದೊತ್ತಡ ಕಡಿಮೆಯಾಗುತ್ತದೆ ಹಾಗೂ ಹೆಚ್ಚಿನ ಮಕ್ಕಳಿಗೆ ಲಸಿಕೆಯನ್ನು ನೀಡಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದರು.

ನಗರ ಅಥವಾ ಗ್ರಾಮೀಣ ಪ್ರದೇಶವಾಗಲಿ, ಪ್ರದೇಶಕ್ಕೆ ಅನುಕೂಲವಾಗುವ ಸೂಕ್ತ ಯೋಜನೆಯನ್ನು ರೂಪಿಸಿಕೊಂಡು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅನುಷ್ಠಾನಗೊಂಡರೆ, ಎಲ್ಲಾ ಅರ್ಹ ಮಕ್ಕಳು ಲಸಿಕೆ ಪಡೆಯಬಹುದು. ಅಲ್ಲದೇ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮದ ಕುರಿತು ಮುಂಚಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಅಧಿಕಾರಿಗಳು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

ಪಲ್ಸ್ ಪೋಲಿಯೋ ಲಸಿಕೆಯ ಅನುಷ್ಠಾನ ಕಾರ್ಯದಲ್ಲಿ ಸೂಕ್ತ ಮೇಲುಸ್ತುವಾರಿ ಹಾಗೂ ನಿರ್ವಹಣೆಯಾಗಬೇಕು. ಇದರಿಂದ, ಲಸಿಕೆ ಪಡೆದ ಮಕ್ಕಳ ಮಾಹಿತಿ ಸಂಗ್ರಹಿಸಲು ಅನುಕೂಲವಾಗಲಿದೆ. ರಾಷ್ಟ್ರೀಯ ಹೆದ್ದಾರಿ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ಟೂಲ್‌ ಪ್ರದೇಶ ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಬೇಕು. ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಅಂಗವಾಗಿ ಮೊದಲ ದಿನ ಲಸಿಕಾ ಕೇಂದ್ರಗಳಲ್ಲಿ ಹಾಗೂ ಉಳಿದ ಮೂರು ದಿನ ಮನೆಗಳಿಗೆ ಭೇಟಿ ನೀಡಿ ಲಸಿಕೆಯನ್ನು ನೀಡಲಾಗುವುದು. ಲಸಿಕಾ ಕಾರ್ಯದಲ್ಲಿ ತೊಡಗುವ ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ಗೌರವ ಧನ ಸೂಕ್ತ ಸಮಯದಲ್ಲಿ ಸಿಗುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಈ ಆರೋಗ್ಯ ಸಮಸ್ಯೆ ಉಳ್ಳವರು ಬೆಲ್ಲ-ಹುರಿಗಡಲೆ ಸೇವಿಸಿ: ವಾರದಲ್ಲಿ ಪರ್ಮನೆಂಟ್ ರಿಲೀಫ್ ಸಿಗುತ್ತೆ!

ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. ಜಿಲ್ಲಾವಾರು ಲಸಿಕೆ ಪಡೆಯುವ ಮಕ್ಕಳ ಮಾಹಿತಿ ಸಂಗ್ರಹಣೆಗೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಲಸಿಕೆ ಕಾರ್ಯಕ್ರಮದ ಬಗ್ಗೆ ಎಲ್ಲಾ ಹಂತಗಳಲ್ಲಿ ಹೆಚ್ಚಿನ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News