ಸಿದ್ದರಾಮಯ್ಯನವರನ್ನ ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆ
Karnataka ahinda community: ಒಕ್ಕಲಿಗ ಸ್ವಾಮೀಜಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿದೆ. ಇದರೊಂದಿಗೆ ಲಿಂಗಾಯತ ಮತ್ತು ಒಕ್ಕಲಿಗ ಸ್ವಾಮೀಜಿಗಳು ತಮ್ಮ ತಮ್ಮ ಸಮುದಾಯದ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಹುಬ್ಬಳ್ಳಿ: ಒಕ್ಕಲಿಗ ಸ್ವಾಮೀಜಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿದೆ. ಇದರೊಂದಿಗೆ ಲಿಂಗಾಯತ ಮತ್ತು ಒಕ್ಕಲಿಗ ಸ್ವಾಮೀಜಿಗಳು ತಮ್ಮ ತಮ್ಮ ಸಮುದಾಯದ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಈಗ ಅಹಿಂದ ಅಖಾಡಕ್ಕೆ ಇಳಿದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಿಸಲು ಅಹಿಂದ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. 5 ವರ್ಷ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರಬೇಕು.
ಇದನ್ನೂ ಓದಿ-ಜಾರಕಿಹೊಳಿ ಬ್ರದರ್ಸ್ ಮಣಿಸಲು ಲಕ್ಷ್ಮಣ ಸವದಿಗೆ ಒಲಿಯುತ್ತಾ ಕೆಪಿಸಿಸಿ ಪಟ್ಟ..!?
ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು. ಕೆಲವು ಸ್ವಾಮೀಜಿಗಳು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಇಂತಹ ಹೇಳಿಕೆಗಳು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತರುತ್ತೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು ಎಂದು ಆಗ್ರಹಿಸಿದರು.
ಇದನ್ನೂ ಓದಿ-ಸಿದ್ದರಾಮಯ್ಯ ನೇತೃತ್ವದ ನಿಯೋಗದಿಂದ ಪ್ರಧಾನಿ ಮೋದಿ ಭೇಟಿ
ಸಿಎಂ ಬದಲಾವಣೆ ಆಗಬೇಕು ಎಂದು ಸ್ವಾಮೀಜಿಗಳು ಹೇಳಿದ್ದಾರೆ. ಹೀಗಾಗಿ ಅದು ಚಂದ್ರಶೇಖರ ಸ್ವಾಮೀಜಿಯವರ ವೈಯಕ್ತಿಕ ಅಭಿಪ್ರಾಯ. ಮುಖ್ಯಮಂತ್ರಿ ಬದಲಾವಣೆ ಆದ್ರೆ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ. ಅಹಿಂದ ನಾಯಕರನ್ನ ತುಳಿಯೋ ಕೆಲಸ ನಡೆಯುತ್ತಿದೆ ಎಂದು ಕಿಡಿಕಾರಿದ ಪ್ರಭುಲಿಂಗ, ಸಿದ್ದರಾಮಯ್ಯ ಬೆನ್ನೆಲುಬಾಗಿ ನಿಲ್ಲುತ್ತೇವೆ. ಪ್ರತಿ ಜಿಲ್ಲೆಯಲ್ಲೂ ಅಹಿಂದ ಸಂಘಟನೆ ಮಾಡಿದ್ದೇವೆ. ರಾಜ್ಯದ ಜನ ಸಿದ್ದರಾಮಯ್ಯರನ್ನ ನೋಡಿ ಕಾಂಗ್ರೆಸ್ಗೆ ವೋಟ್ ಹಾಕಿದ್ದಾರೆ ಎಂದರು.
ಇನ್ನು ಸಿದ್ದರಾಮಯ್ಯ ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಿಸಲು ಅಹಿಂದ ಮುಖಂಡರು ಇಂದು ಹುಬ್ಬಳ್ಳಿಯಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬದ ಅಂಗವಾಗಿ ಇದೇ ಮೊದಲ ಬಾರಿಗೆ ಅಹಿಂದ ರತ್ನ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಿದ್ದು, ವಿವಿಧ ಕ್ಷೇತ್ರಗಳ 50 ಸಾಧಕರಿಗೆ ಅಹಿಂದ ರತ್ನ ಪ್ರಶಸ್ತಿ ಪ್ರದಾನ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.