ಬೆಂಗಳೂರು: ಕೃಷಿ , ತೋಟಗಾರಿಕೆ, ಲೋಕೋಪಯೋಗಿ ಹಾಗೂ ಪಶುಸಂಗೋಪನೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.


COMMERCIAL BREAK
SCROLL TO CONTINUE READING

ಕೃಷಿ , ತೋಟಗಾರಿಕೆ, ಲೋಕೋಪಯೋಗಿ ಹಾಗೂ ಪಶುಸಂಗೋಪನೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಶುಕ್ರವಾರ ಸಮಾಲೋಚನೆ ನಡೆಸಿದ ಸಿಎಂ ಕುಮಾರಸ್ವಾಮಿ, ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ವಿವರವಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ ನಂತರ, ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಸಭೆಯಲ್ಲಿ ತಿಳಿಸಿದರು.


ಸಭೆಯಲ್ಲಿ  ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ತೋಟಗಾರಿಕೆ ಸಚಿವ ಮನಗೂಳಿ ಮಲ್ಲಪ್ಪ ಚನ್ನವೀರಪ್ಪ , ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ , ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|| ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ,  ಲೋಕೋಪಯೋಗಿ ಮತ್ತು ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ||ರಜನೀಶ್ ಗೋಯಲ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.