ದಿನಗೂಲಿ ನೌಕರರಿಗೆ ತಾತ್ಕಾಲಿಕ ವಸತಿ, ಆಹಾರದ ವ್ಯವಸ್ಥೆ ಗೆ ಕ್ರಮ -ಸಿಎಂ ಭರವಸೆ

ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಲವು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ. ಈಗ ರಾಜ್ಯದಲ್ಲಿ ಇಲ್ಲಿಯವರೆಗೆ 110 ಕೊರೊನ ಸೋಂಕು ಪ್ರಕರಣಗಳು ದಾಖಲಾಗಿವೆ.

Last Updated : Apr 1, 2020, 11:59 PM IST
ದಿನಗೂಲಿ ನೌಕರರಿಗೆ ತಾತ್ಕಾಲಿಕ ವಸತಿ, ಆಹಾರದ ವ್ಯವಸ್ಥೆ ಗೆ ಕ್ರಮ -ಸಿಎಂ ಭರವಸೆ  title=

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಲವು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ. ಈಗ ರಾಜ್ಯದಲ್ಲಿ ಇಲ್ಲಿಯವರೆಗೆ 110 ಕೊರೊನ ಸೋಂಕು ಪ್ರಕರಣಗಳು ದಾಖಲಾಗಿವೆ.

ಈ ಪೈಕಿ ಮೂವರು ಮೃತಪಟ್ಟಿದ್ದು, 9 ಜನರನ್ನು ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಉಳಿದವರ ಚಿಕಿತ್ಸೆ, ಇವರೊಂದಿಗೆ ಸಂಪರ್ಕ ಹೊಂದಿದ್ದ ಶಂಕಿತ ಸೋಂಕಿತರ ಪ್ರತ್ಯೇಕಿಸುವಿಕೆ ಕಾರ್ಯ ಮುಂದುವರೆದಿದೆ ಎಂದು ಸರ್ಕಾರ ತಿಳಿಸಿದೆ

ಇದೇ ವೇಳೆ ಕೊರೊನ ಸೋಂಕು ಹರಡದಂತೆ ತಡೆಯಲು ಕ್ವಾರಂಟೈನ್ ನಲ್ಲಿರುವವರು, ವೈದ್ಯರು ಮತ್ತು ಸರ್ಕಾರದ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಕೋವಿಡ್19 ವಿರುದ್ಧದ ಸರ್ಕಾರದ ಹೋರಾಟಕ್ಕೆ ಕೈಜೋಡಿಸುವಂತೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.

ಇನ್ನು ಕೋವಿಡ್_19 ಹರಡುವುದನ್ನು ತಡೆಯಲು ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸಂಕಷ್ಟ ಎದುರಿಸುತ್ತಿರುವ ದಿನಗೂಲಿ ನೌಕರರಿಗೆ ತಾತ್ಕಾಲಿಕ ವಸತಿ ಹಾಗೂ ಆಹಾರದ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ.ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಸಿಎಂ  ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್19 ಹರಡದಂತೆ ತಡೆಯಲು ಸಂತರು, ಸ್ವಾಮೀಜಿಗಳು, ಫಾದರ್ ಗಳು ಹಾಗೂ ಮೌಲ್ವಿಗಳು ಸೇರಿದಂತೆ ಎಲ್ಲ‌ ಧಾರ್ಮಿಕ ಮುಖಂಡರು ಪ್ರತಿದಿನ ದೇವರಲ್ಲಿ ಪ್ರಾರ್ಥಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡಿದ್ದಾರೆ.

Trending News