ಪಾರ್ಕಿಂಗ್ ಸಮಸ್ಯೆ ಶಾಶ್ವತವಾಗಿ ಪರಿಹರಿಸಲು ಕ್ರಮ: ಗೃಹ ಸಚಿವ ಡಾ. ಜಿ ಪರಮೇಶ್ವರ್

ವಿಧಾನಸೌಧದಲ್ಲಿ ಪ್ರಶ್ನಾವಳಿ ಅವಧಿ ವೇಳೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಪಾರ್ಕಿಂಗ್ ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

Written by - Prashobh Devanahalli | Last Updated : Jul 16, 2024, 12:34 PM IST
    • ಪಾರ್ಕಿಂಗ್ ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರ
    • ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ಕ್ರಮ
    • ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿಕೆ
ಪಾರ್ಕಿಂಗ್ ಸಮಸ್ಯೆ ಶಾಶ್ವತವಾಗಿ ಪರಿಹರಿಸಲು ಕ್ರಮ: ಗೃಹ ಸಚಿವ ಡಾ. ಜಿ ಪರಮೇಶ್ವರ್ title=
Home Minister Dr Parameshwar

ಬೆಂಗಳೂರು: ಬೆಂಗಳೂರು ನಗರದಲ್ಲಿನ ಪಾರ್ಕಿಂಗ್  ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಬಿಬಿಎಂಪಿ ಮತ್ತು ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು‌.

ಇದನ್ನೂ ಓದಿ: ತನಗಿಂತ 10 ವರ್ಷ ಹಿರಿಯ, 2 ಮಕ್ಕಳ ತಾಯಿಯನ್ನು ಪ್ರೀತಿಸಿ ಮದುವೆಯಾದ ಖ್ಯಾತ ಕ್ರಿಕೆಟರ್ ಈತ! ಆದ್ರೆ ಕೊನೆಗೆ ಆಗಿದ್ದು ಡಿವೋರ್ಸ್!

ವಿಧಾನಸೌಧದಲ್ಲಿ ಪ್ರಶ್ನಾವಳಿ ಅವಧಿ ವೇಳೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಪಾರ್ಕಿಂಗ್ ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ನಗರದಲ್ಲಿ ಇನ್ಫ್ರಾಸ್ಟ್ರಕ್ಚರ್‌’ಗಳಿಗೆ ನಿಯಮಗಳನ್ನು ರೂಪಿಸದಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ‌‌.‌ ಇದನ್ನು ತಡೆಗಟ್ಟಲು ಬಿಬಿಎಂಪಿ, ಸಾರಿಗೆ ಇಲಾಖೆಯವರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಮನೆಕಟ್ಟುವಾಗ ವಾಹನಗಳ ಪಾರ್ಕಿಂಗ್‌ಗೆ ಸ್ಥಳ ಇದ್ದರೆ ಮಾತ್ರ ಅನುಮತಿ ನೀಡಬೇಕು. ಇಂತಹ ನಿಯಮಗಳನ್ನು ತರಲು ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ 1194 ನೋ ಪಾರ್ಕಿಂಗ್ ರಸ್ತೆಗಳೆಂದು ಗುರುತಿಸಲಾಗಿದೆ. 2022ರಲ್ಲಿ 12,07,651 ಪ್ರಕರಣಗಳಲ್ಲಿ 20,84,56,000 ರೂ. ದಂಡ, 2023ರಲ್ಲಿ 11,30,855 ಪ್ರಕರಣಗಳಿಗೆ ರೂ 37,30,22,000, 2024 (ಜೂನ್ 3ರವರೆಗೆ) 5,21,326 ಪ್ರಕರಣಗಳನ್ನು ದಾಖಲಿಸಿ 5,97,00,200 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಇಷ್ಟು ವರ್ಷವಾದ್ರೂ RCB ಕಪ್ ಗೆಲ್ಲದಿರಲು ಕಾರಣ ತಂಡದಲ್ಲಿರುವ ಈ ಕೆಟ್ಟ ಪದ್ಧತಿ! ತನ್ನದೇ ತಂಡದ ವಿರುದ್ಧ ಸ್ಟಾರ್ ಆಟಗಾರ ಕಿಡಿ

ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸಲು ಕೆಳಹಂತದ ಸಿಬ್ಬಂದಿಗಳು ಮಾತ್ರವಲ್ಲದೇ ಸಂಚಾರ ವಿಭಾಗದ ಡಿಸಿಪಿ, ಎಸಿಪಿಯವರು ಬೆಳಗ್ಗೆ ಮತ್ತು ಸಂಜೆ ವೇಳೆ ಕನಿಷ್ಟ ಎರಡು ತಾಸು ರಸ್ತೆಗಿಳಿದು ಕೆಲಸ ಮಾಡುವಂತೆ ಈಗಾಗಲೇ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು‌.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

Trending News