ಬೆಂಗಳೂರು : ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಮತ್ತೊಮ್ಮೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ದುಷ್ಕರ್ಮಿಗಳು ಬೆಂಗಳೂರಿನಲ್ಲಿ ಮೈಸೂರು - ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಟಾರ್ಗೆಟ್ ಮಾಡಿದ್ದಾರೆ. ಮೈಸೂರು - ಚೆನ್ನೈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಿಂದ ರೈಲಿನ ಎರಡು ಗಾಜುಗಳಿಗೆ ಹಾನಿಯಾಗಿದೆ. ಕೃಷ್ಣರಾಜಪುರಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ. ದಾಳಿಯಲ್ಲಿ ಯಾರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಬೆಂಗಳೂರಲ್ಲೇ ಮನೆ ಮಾಡಲಿದ್ದಾರೆ ಕೇಂದ್ರ ಸಚಿವ ಅಮಿತ್ ಶಾ, ಧರ್ಮೇಂದ್ರ ಪ್ರಧಾನ್!


"ಕೆಲವು ಕಿಡಿಗೇಡಿಗಳು ರೈಲಿಗೆ ಕಲ್ಲು ತೂರಿದ್ದರಿಂದ ರೈಲು ಸಂಖ್ಯೆ 20608 ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ಕೋಚ್‌ನ ಎರಡು ಕಿಟಕಿಗಳಿಗೆ ಹಾನಿಯಾಗಿದೆ. ಕೃಷ್ಣರಾಜಪುರಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಇಂದು ಈ ಘಟನೆ ನಡೆದಿದೆ" ಎಂದು ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.


[[{"fid":"287415","view_mode":"default","fields":{"format":"default","field_file_image_alt_text[und][0][value]":"Vande Bharat Express ","field_file_image_title_text[und][0][value]":"ವಂದೇ ಭಾರತ್ ಎಕ್ಸ್‌ಪ್ರೆಸ್ "},"type":"media","field_deltas":{"1":{"format":"default","field_file_image_alt_text[und][0][value]":"Vande Bharat Express ","field_file_image_title_text[und][0][value]":"ವಂದೇ ಭಾರತ್ ಎಕ್ಸ್‌ಪ್ರೆಸ್ "}},"link_text":false,"attributes":{"alt":"Vande Bharat Express ","title":"ವಂದೇ ಭಾರತ್ ಎಕ್ಸ್‌ಪ್ರೆಸ್ ","class":"media-element file-default","data-delta":"1"}}]]


ಇತ್ತೀಚಿನ ದಿನಗಳಲ್ಲಿ, ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟದ ಅನೇಕ ಘಟನೆಗಳು ಮುನ್ನೆಲೆಗೆ ಬಂದಿವೆ. ರೈಲ್ವೇ ಸಂರಕ್ಷಣಾ ಪಡೆ ಜನವರಿಯಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ 21 ಪ್ರಕರಣಗಳನ್ನು ಮತ್ತು ಫೆಬ್ರವರಿಯಲ್ಲಿ 13 ಪ್ರಕರಣಗಳನ್ನು ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದಲ್ಲಿ ದಾಖಲಿಸಿದೆ. 


ಇದನ್ನೂ ಓದಿ : Nisha Noor: ಬಡತನದಿಂದ ವೇಶ್ಯಾವಾಟಿಕೆ.. ಏಡ್ಸ್‌ನಿಂದ ಅಂತ್ಯವಾಯ್ತು ಈ ಸುಂದರ ನಟಿಯ ಬದುಕು!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.