ಜನರ ಪ್ರಾಣದ ಜೊತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಿ: ರಾಜ್ಯ ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ

ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್‌ಡೌನ್‌ ಮಾಡಿ.  

Last Updated : Jun 23, 2020, 09:15 AM IST
ಜನರ ಪ್ರಾಣದ ಜೊತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಿ: ರಾಜ್ಯ ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ title=

ಬೆಂಗಳೂರು: ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಲಾಕ್‌ಡೌನ್‌ ಮಾಡಿರುವ ಬಗ್ಗೆ ಕಿಡಿಕಾರಿರುವ ಮಾಜಿ‌ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) 'ಜನರ ಪ್ರಾಣದ ಜೊತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಿ' ಎಂದು‌ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ‌ ಬಗ್ಗೆ ಸರಣಿ‌ ಟ್ವೀಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ ಮೊದಲ ಟ್ವೀಟ್ ನಲ್ಲಿ 'ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್‌ಡೌನ್‌ (Lockdown) ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ' ಎಂದಿದ್ದಾರೆ.

ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್‌ಡೌನ್‌ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ.

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ.

ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
 

Trending News