ಬೆಂಗಳೂರು: ನೆರೆಯ ಮಹಾರಾಷ್ಟ್ರದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವದರಿಂದ ಕೃಷ್ಣಾ ನದಿಯ ಒಳಹರಿವು ಹೆಚ್ಚಿದೆ. ಆಲಮಟ್ಟಿ ಜಲಾಶಯದ ಒಳಹರಿವು ಇಂದು 75,207 ಕ್ಯೂಸೆಕ್ಸ್ ಇದೆ. ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗುವ ಸಂಭವವಿದೆ ಎಂದು ವರದಿಗಳು ತಿಳಿಸಿವೆ. ಈ ಹಿನ್ನಲೆ ಬೆಳಗಾವಿ ಹಾಗೂ ಬಾಗಲಕೋಟ ಜಿಲ್ಲಾಡಳಿತ ಸಂಪೂರ್ಣವಾಗಿ ಸನ್ನದ್ಧ ಸ್ಥಿತಿಯಲ್ಲಿದ್ದು, ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕೆಂದು ಸೂಚಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇನ್ನು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ವ್ಯಾಪಕ ಮಳೆ ಹಿನ್ನೆಲೆ ತುಂಗಭದ್ರಾ ಜಲಾಶಯ ಭರ್ತಿಯಾಗಲು ಇನ್ನೂ 9 ಅಡಿ ಬಾಕಿಯಿದೆ. ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯಕ್ಕೆ 82,103 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಸದ್ಯ ಜಲಾಶಯದಲ್ಲಿ 1621 ಅಡಿ ನೀರು ಇದೆ. 105 TMC ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 64.728 ಟಿಎಂಸಿ ನೀರು ಸಂಗ್ರಹವಾಗಿದೆ. ಒಂದೇ ದಿನ 5 ಟಿಎಂಸಿ ನೀರು ಜಲಾಶಯಕ್ಕೆ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಇದಲ್ಲದೆ ಭದ್ರಾ, ಲಿಂಗನಮಕ್ಕಿ ಸೇರಿದಂತೆ ಇನ್ನುಳಿದ ಜಲಾಯಶಗಳು ಸಹ ಮಳೆಯಿಂದಾಗಿ ಭರ್ತಿಯಾಗಿವೆ. ಮಳೆಯ ಅಬ್ಬರಕ್ಕೆ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಮಾಹಿತಿಯ ಪ್ರಕಾರ ಯಾವ್ಯಾವ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಅಥವಾ ಸಾಮರ್ಥ್ಯ ಎಷ್ಟಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ