Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ ನೋಡಿ

ಕೃಷ್ಣಾ ನದಿಯಿಂದ ಚಿಕ್ಕೋಡಿ ತಾಲೂಕಿನ 2 ಕೆಳ ಹಂತದ ಸೇತುವೆಗಳ ಜಲಾವೃತಗೊಂಡಿವೆ. ವೇದಗಂಗಾ ನದಿಯಿಂದ ನಿಪ್ಪಾಣಿ ತಾಲೂಕಿನ 5 ಸೇತುವೆಗಳು ಜಲಾವೃತವಾಗಿವೆ.

Written by - Puttaraj K Alur | Last Updated : Jul 14, 2022, 04:17 PM IST
  • ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ ಕೃಷ್ಣಾ ನದಿನೀರಿನ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ
  • ಕೊಪ್ಪಳ ಜಿಲ್ಲೆಯ ತುಂಗಭದ್ರಾ ಜಲಾಶಯ ಭರ್ತಿ ಹಿನ್ನೆಲೆ ಕರ್ನಾಟಕ ನೀರಾವರಿ ನಿಗಮದಿಂದ ಬಾಗಿನ ಅರ್ಪಣೆ
  • ಕಾವೇರಿ ಡ್ಯಾಂನಿಂದ ಮತ್ತೆ 75 ಸಾವಿರ ಕ್ಯೂಸೆಕ್ ನಿಂದ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಸಾಧ‍್ಯತೆ
Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ ನೋಡಿ title=
ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ

ಬೆಂಗಳೂರು: ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಕೃಷ್ಣಾ ನದಿನೀರಿನ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದೆ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 1.12 ಲಕ್ಷ ಕ್ಯೂಸೆಕ್ ಗಿಂತ ಅಧಿಕ ಒಳಹರಿವು ಬಂದಿದೆ. ಪ್ರವಾಹ ಪರಿಸ್ಥಿತಿ ತಗ್ಗಿಸಲು ಹಿಪ್ಪರಗಿ, ಆಲಮಟ್ಟಿ ಜಲಾಶಯದಿಂದ ಅಷ್ಟೇ ಪ್ರಮಾಣದಲ್ಲಿ ನೀರು ಹೊರಗೆ ಬಿಡಲಾಗುತ್ತಿದೆ. ಕೃಷ್ಣಾ ನದಿಯಿಂದ ಚಿಕ್ಕೋಡಿ ತಾಲೂಕಿನ 2 ಕೆಳ ಹಂತದ ಸೇತುವೆಗಳ ಜಲಾವೃತಗೊಂಡಿವೆ. ವೇದಗಂಗಾ ನದಿಯಿಂದ ನಿಪ್ಪಾಣಿ ತಾಲೂಕಿನ 5 ಸೇತುವೆಗಳು ಜಲಾವೃತವಾಗಿವೆ. ಇದಲ್ಲದೆ ದೂಧಗಂಗಾ ನದಿಯಿಂದ 2 ಸೇತುವೆ ಜಲಾವೃತಗೊಂಡಿವೆ. ನೀರಿನ ಪ್ರಮಾಣ ಹೆಚ್ಚಾದಲ್ಲಿ ಕುಡಚಿ ಸೇತುವೆ ಮುಳುಗಡೆಯಾಗಿ ಮಹಾರಾಷ್ಟ್ರ ರಾಜ್ಯ ಸಂಪರ್ಕ‌ ಬಂದ್ ಆಗಲಿದೆ. ಹೀಗಾಗಿ ಕೃಷ್ಣಾ ನದಿ ಪಾತ್ರದ ಗ್ರಾಮದ ಜನರಿಗೆ ಅರ್ಲಟ್ ಆಗಿರಲು ಸೂಚನೆ ನೀಡಲಾಗಿದೆ.

ತುಂಗಭದ್ರಾ ಡ್ಯಾಂಗೆ ಬಾಗಿನ ಅರ್ಪನೆ

ರಾಜ್ಯದಲ್ಲಿ ಭಾರೀ ಮಳೆಯಿಂದ ಕೊಪ್ಪಳ ಜಿಲ್ಲೆಯ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆ ಕರ್ನಾಟಕ ನೀರಾವರಿ ನಿಗಮದಿಂದ ಬಾಗಿನ ಅರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್‍ ಬಾಗಿನ ಅರ್ಪಿಸಿದ್ದಾರೆ. ಕೊಪ್ಪಳ ಸಂಸದ ಸಂಗಣ್ಣ ಕರಡಿ ಭಾಗಿಯಾಗಿದ್ದರು. ಬಾಗಿನ ಅರ್ಪಣೆಗೂ ಮುನ್ನ ಗಂಗಾಪೂಜೆ, ಮಹಾಗಣಪತಿ ಪೂಜೆ ನೆರವೇರಿಸಲಾಯಿತು.

ಇದನ್ನೂ ಓದಿ: ಬಿಎಂಟಿಸಿ ಬಳಿಕ ಈಗ ಕೆಎಸ್ಆರ್ ಟಿಸಿಗೂ ಬರಲಿವೆ ಎಲೆಕ್ಟ್ರಿಕ್ ಬಸ್..!

ಜನರಿಗೆ ಪ್ರವಾಹದ ಎಚ್ಚರಿಕೆ..!

ನಿರಂತರ ಮಳೆಯಿಂದಾಗಿ ಮಡ್ಯ ಜಿಲ್ಲೆಯ ಕಾವೇರಿ ನದಿ ಭರ್ತಿಯಾಗಿದೆ. ಕಾವೇರಿ ಡ್ಯಾಂನಿಂದ ಮತ್ತೆ 75 ಸಾವಿರ ಕ್ಯೂಸೆಕ್ ನಿಂದ 1.5 ಲಕ್ಷ ಕ್ಯೂಸೆಕ್  ನೀರು ಬಿಡುಗಡೆ ಮಾಡುವ ಸಾಧ‍್ಯತೆ ಇದ್ದು, ಕಾವೇರಿ ನದಿ ಪಾತ್ರದ ಜನರಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ನದಿ ಪಾತ್ರದಲ್ಲಿ ಹೆಚ್ಚಿನ ಅನಾಹುತ ಸಾಧ್ಯತೆ ಇದೆ. ರಂಗನತಿಟ್ಟು ಪಕ್ಷಿಧಾಮ ಬಹುತೇಕ ಮುಳುಗಡೆಯಾಗಲಿದ್ದು, ಪಕ್ಷಿಗಳು ಸೇರಿ ಗೂಡು ಕೊಚ್ಚಿ ಹೋಗುವ ಸಾಧ್ಯತೆ ಇದೆ. ಹೀಗಾಗಿ ಪ್ರವಾಸಿ ತಾಣಗಳ ಬಳಿ ನದಿ ಪಾತ್ರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಭದ್ರಾ ಜಲಾಶಯ ಭರ್ತಿಯಾಗಿದೆ. ಡ್ಯಾಂನ ನೀರಿನ ‌ಮಟ್ಡ 183 ಅಡಿಗೆ ಏರಿಕೆಯಾಗಿದೆ. ಗರಿಷ್ಠ 186 ಅಡಿ ನೀರಿನ ಮಟ್ಟ ಹೊಂದಿರುವ ಭದ್ರಾ ಡ್ಯಾಂಗೆ 43 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಇಂದು ಮಧ್ಯಾಹ್ನ 12 ಗಂಟೆಗೆ ಡ್ಯಾಂ ನಿಂದ ನದಿಗೆ ನೀರು ಹರಿಸಲಾಗುತ್ತಿದೆ. ತಗ್ಗು ಪ್ರದೇಶದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ: Kick Boxing Death: ಕಿಕ್ ಬಾಕ್ಸಿಂಗ್ ಸ್ಪರ್ಧೆ ವೇಳೆ ಮೈಸೂರಿನ ಕಿಕ್ ಬಾಕ್ಸರ್ ಸಾವು..!

ಇದಲ್ಲದೆ ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿವಿಧ ಡ್ಯಾಂಗಳು ಬಹುತೇಕ ಭರ್ತಿಯಾಗಿ ತುಂಬಿ ತುಳುಕುತ್ತಿವೆ. ಯಾವುದೇ ಕ್ಷಣದಲ್ಲಿ ಡ್ಯಾಂಗಳಿಂದ ನೀರು ಹೊರಬೀಡುವ ಸಾಧ್ಯತೆ ಇರುವುದರಂದ ನದಿ ಪಾತ್ರದಲ್ಲಿರುವ ಜನರು ಸುರಕ್ಷಿತ ಸ್ಥಳಗಳತ್ತ ತೆರಳುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಇಂದಿನ ಮಾಹಿತಿಯ ಪ್ರಕಾರ ಯಾವ್ಯಾವ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಅಥವಾ ಸಾಮರ್ಥ್ಯ ಎಷ್ಟಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News