ಪಡಿತರ ವಿತರಣಾ ವ್ಯವಸ್ಥೆಯನ್ನು ಬಲಪಡಿಸಿ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಿಸಿದಂತೆ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಡಿತರ ವಿತರಣಾ ವ್ಯವಸ್ಥೆಯನ್ನು ಬಲಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಡಿತರ ವಿತರಣಾ ವ್ಯವಸ್ಥೆಯಡಿ ಅಗತ್ಯವಿರುವ ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದ ಮುಖ್ಯಮಂತ್ರಿಗಳು ಮುಕ್ತಮಾರುಕಟ್ಟೆಯಿಂದ ತೊಗರಿಬೇಳೆ ಖರೀದಿಸಲು ಇ-ಪ್ರೊಕ್ಯೂರ್ ಮೆಂಟ್ ಪೋರ್ಟಲ್ ಮೂಲಕ ಇ-ಟೆಂಡರ್‍ಗೆ ಸರ್ಕಾರ ವ್ಯವಸ್ಥೆ ಮಾಡಿಕೊಂಡಿದೆ ಎಂದರು.
ಅನ್ನಭಾಗ್ಯ ಯೋಜನೆಯಡಿ 3750 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮೀರ್ ಅಹಮದ ಖಾನ್ ತಿಳಿಸಿದರು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ ಹಾಗೂ ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.