ಬೆಂಗಳೂರು: ಬೆಳಗಾವಿಯಲ್ಲಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಭೀಕರವಾಗಿ ಕೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ಜೈನ ಮುನಿಗಳ ಹತ್ಯೆ ಖಂಡನೀಯ. ಇದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಅಂತಾ ಹೇಳಿದ್ದಾರೆ.


ಇದನ್ನೂ ಓದಿ: Karnataka Rains: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು, ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ 


ಜೈನಮುನಿ ಹತ್ಯೆ ಪ್ರಕರಣ ಸಂಬಂಧ ಯಾರೊಬ್ಬರೂ ಪ್ರಚೋದನೆಗೆ ಒಳಗಾಗಬಾರದು, ಬೇರೆಯವರನ್ನು ಪ್ರಚೋದಿಸಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಡಿಕೆಶಿ ಮನವಿ ಮಾಡಿಕೊಂಡಿದ್ದಾರೆ.


ಇನ್ನು ಸ್ವಾಮೀಜಿಗಳಿಗೆ ಭದ್ರತೆ ನೀಡಬೇಕು ಎಂದು ಅನ್ನ, ನೀರು ತ್ಯಜಿಸಿ ಬೆಳಗಾವಿಯ ಗೊರೂರು ಮಠದ ಗುಣಾಧಾರನಂದಿ ಮಹಾರಾಜ ಸ್ವಾಮೀಜಿಗಳು ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಮಾಹಿತಿ ಬಂದಿದೆ. ಸ್ವಾಮೀಜಿಗಳಿಗೆ ಭದ್ರತೆ ನೀಡುವ ಕೆಲಸ ಮಾಡುತ್ತೇವೆ. ಕೂಡಲೇ ಅವರು ತಮ್ಮ ಪ್ರತಿಭಟನೆ ಕೈಬಿಡಬೇಕು. ನಾನು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ಸಂಪರ್ಕ ಸಾಧ್ಯವಾಗಿಲ್ಲ. ಹೀಗಾಗಿ ಸ್ಥಳೀಯ ಶಾಸಕರು, ಮಂತ್ರಿಗಳ ಜೊತೆ ಈ ವಿಚಾರವಾಗಿ ಮಾತನಾಡಿದ್ದೇನೆ’ ಎಂದು ತಿಳಿಸಿದರು.


ಇದನ್ನೂ ಓದಿ: ವಿದ್ಯುತ್‌ ತಿದ್ದುಪಡಿ ಮಸೂದೆ ತರಾತುರಿಯಲ್ಲಿ ಬೇಡ: ರೈತ ಸಮುದಾಯ ಕಳವಳ


ಜೈನಮುನಿಗಳ ಭೀಕರ ಕೊಲೆ!


ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಜು. 6ರಂದು ನಾಪತ್ತೆಯಾಗಿದ್ದರು. ಬಳಿಕ ಅವರನ್ನು ಭೀಕರವಾಗಿ ಕೊಲೆ ಮಾಡಿರುವುದು ತಿಳಿದುಬಂದಿತ್ತು. ಹಂತಕರು ಜೈನಮುನಿಯನ್ನು ಭೀಕರವಾಗಿ ಕೊಂದು ದೇಹವನ್ನು ತುಂಡರಿಸಿ, ಶವವನ್ನು 9 ತುಂಡುಗಳಾಗಿಸಿ 400 ಅಡಿ ಆಳದ ಕೊಳವೆಬಾವಿಗೆ ಎಸೆದಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.