ಅಂಗನವಾಡಿಗಳಿಗೆ ಕಳಪೆ ಮೊಟ್ಟೆ ಪೂರೈಕೆ ಮಾಡಿದವರ ವಿರುದ್ಧ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Lakshmi Hebbalkar : ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.  

Written by - RACHAPPA SUTTUR | Last Updated : Jul 13, 2023, 04:00 PM IST
  • ವಿಕೇಂದ್ರೀಕರಣ ಮಾದರಿಯ ಖರೀದಿಯಿಂದ ಪ್ರಾಮಾಣಿಕವಾಗಿ ಪೂರೈಕೆ ಆಗ್ತಿಲ್ಲ
  • ಮೊಟ್ಟೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ
ಅಂಗನವಾಡಿಗಳಿಗೆ ಕಳಪೆ ಮೊಟ್ಟೆ ಪೂರೈಕೆ ಮಾಡಿದವರ ವಿರುದ್ಧ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  title=

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು,  ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡಿದ್ದಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಅಷ್ಟೇ ಅಲ್ಲದೆ ಅಂತಹಾ ಪೂರೈಕೆದಾರರನ್ನು ಸಪ್ಲೈ ಲಿಸ್ಟ್ ನಿಂದಲೂ ಕೈ ಬಿಡುವಂತೆ ಸೂಚನೆ ನೀಡಿದ್ದೇನೆ.ಖರೀದಿ ವಿಕೇಂದ್ರೀಕರಣ ಮಾಡಿದ ಕಾರಣದಿಂದ ಗ್ರಾಮ ಪಂಚಾಯತಿ ಮಟ್ಟದಲ್ಲೂ ಮೊಟ್ಟೆ ಖರೀದಿ ಆಗುತ್ತಿದೆ.‌ಯಾವುದೇ ನಿಯಂತ್ರಣ ಇಲ್ಲದೆ ಖರೀದಿ ನಡೆಯುತ್ತಿದೆ ಎಂಬುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ-ಕಾಸಿಗಾಗಿ ಹುದ್ದೆ: ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದ ಜೆಡಿಎಸ್

ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶ. ಆದರೆ ನಮ್ಮ ಇಲಾಖೆಯ ಉದ್ದೇಶವೇ ಎಡವುತ್ತಿರುವುದು ಗಮನಕ್ಕೆ ಬಂದಿದೆ.‌ ಮೊಟ್ಟೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ. ಇಲಾಖೆಯ ಉದ್ದೇಶ ಈಡೇರಿಸಲು ಬದ್ಧವಾಗಿದ್ದೇವೆ ಎಂದು ಹೇಳಿದರು‌.

ವಿಕೇಂದ್ರೀಕರಣ ಮಾದರಿಯ ಖರೀದಿಯಿಂದ ಪ್ರಾಮಾಣಿಕವಾಗಿ  ಪೂರೈಕೆ ಆಗ್ತಿಲ್ಲ. ಈ ನಿಟ್ಟಿನಲ್ಲಿ ಖರೀದಿ ವ್ಯವಸ್ಥೆ ಕೇಂದ್ರೀಕೃತ ಮಾಡಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ನಿಗಾ ಇಡಲಾಗುತ್ತದೆ ಎಂದು ತಿಳಿಸಿದರು. ಖಾಸಗಿ ಜೊತೆಗೆ  ಸರ್ಕಾರದ ಸಂಸ್ಥೆಗಳಿಂದ ಖರೀದಿಗೆ ಚಿಂತನೆ ಮಾಡಲಾಗಿದೆ. ಎಲ್ಲಾ ಪ್ರಸ್ತಾವಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು‌.

ಇದನ್ನೂ ಓದಿ-Farming Tips : ಮುಸುಕಿನ ಜೋಳದಲ್ಲಿ ಸೈನಿಕ ಹುಳುವಿನ ಭಾದೆಗೆ ಇಲ್ಲಿದೆ ಪರಿಹಾರ

ಗೃಹ ಲಕ್ಷ್ಮೀ ಯೋಜನೆ ಜಾರಿ ವಿಚಾರವಾಗಿ ಇದೇ ಸಂದರ್ಭದಲ್ಲಿ ಮಾತನಾಡಿ, ಯೋಜನೆ ಜಾರಿಗೆ  ದಿನಾಂಕ ಗೊಂದಲ ಮಾತ್ರ ಇದೆ. ಇಲಾಖೆ ಸಿದ್ದವಿದೆ,ಅಗತ್ಯ ಅನುದಾನ ಹಾಗೂ ಫಲಾನುಭವಿ ಪಟ್ಟಿಗಳು ತಯಾರಿವೆ. ಆಧಾರ್ ಲಿಂಕ್ ಇರುವ ಅಕೌಂಟ್ ಅಷ್ಟೇ ಕೊಡುವುದೋ ಅಥವಾ ಬೇರೆ ಅಕೌಂಟ್ ಇರುವ ಫಲಾನುಭವಿಗಳಗೆ ಕೊಡುವುದೋ ಎಂಬ ಗೊಂದಲ ಇದೆ ಎಂದರು‌.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News