`ಎಸ್ಸಿ.ಎಸ್ಟಿ ಮೀಸಲು ಅನುದಾನ ದುರುಪಯೋಗವಾದರೆ ಕಠಿಣ ಕ್ರಮಕ್ಕೆ ಶಿಫಾರಸ್ಸು`
ಸರ್ಕಾರದ ಯೋಜನೆಗಳ ಅನುಷ್ಠಾನ ಜವಾಬ್ದಾರಿ ಹೊತ್ತವರು ಇಲಾಖಾ ಅಧಿಕಾರಿಗಳು ಯೋಜನೆಗಳ ಅನುಷ್ಠಾನದಲ್ಲಿ ಬದ್ಧತೆ ಹಾಗೂ ಕಾಳಜಿ ಇರಲಿ ಎಂದು ಕರ್ನಾಟಕ ವಿಧಾನ ಮಂಡಳ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ತಿಳಿಸಿದರು.
ಧಾರವಾಡ: ಸರ್ಕಾರದ ಯೋಜನೆಗಳ ಅನುಷ್ಠಾನ ಜವಾಬ್ದಾರಿ ಹೊತ್ತವರು ಇಲಾಖಾ ಅಧಿಕಾರಿಗಳು ಯೋಜನೆಗಳ ಅನುಷ್ಠಾನದಲ್ಲಿ ಬದ್ಧತೆ ಹಾಗೂ ಕಾಳಜಿ ಇರಲಿ ಎಂದು ಕರ್ನಾಟಕ ವಿಧಾನ ಮಂಡಳ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ತಿಳಿಸಿದರು.
ಅವರು ಧಾರವಾಡದ ಸೃಜನಾ ರಂಗ ಮಂದಿರದಲ್ಲಿ ಗುರುವಾರ ಧಾರವಾಡ ಜಿಲ್ಲೆಗೆ ಸಂಭಂದಿಸಿದಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಮಾಜಿಕ ಅಸಮಾನತೆ ಎಂಬುದು ಸಮಾಜಕ್ಕೆ ಅಂಟಿದ ಪಿಡುಗು. ಇದನ್ನು ದೂರ ಮಾಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರನ್ನು ಆರ್ಥಿಕವಾಗಿ ಮೇಲೆತ್ತುವ ಕಾರ್ಯವನ್ನು ಮಾಡಬೇಕು ಎಂದರು. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಇಲಾಖಾಧಿಕಾರಿಗಳು ತಮ್ಮ ಹಂತದಲ್ಲಿ ಇರುವ ಜನಪರ ಯೋಜನೆಗಳನ್ನು ಹಾಗೂ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವ ಮೂಲಕ ನಿರುದ್ಯೋಗ ನಿವಾರಣೆ ಮಾಡಬೇಕು. ಇದರೊಟ್ಟಿಗೆ ಕೆಳ ಸಮುದಾಯದ ಅಭಿವೃದ್ಧಿಗಾಗಿ ಉತ್ಸಾಹದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಇದನ್ನೂ ಓದಿ: ರಾಜ್ಯದ ಜನರಿಗೆ ಮತ್ತೊಂದು ಶಾಕ್..! ಸದ್ಯದಲ್ಲೇ ಏರಿಕೆ ಆಗಲಿದೆ ಬಸ್ ಟಿಕೆಟ್ ದರ
ಅಧಿಕಾರಿಗಳು ತಮ್ಮ ದೈನಂದಿನ ಕಾರ್ಯನಿರ್ವಹಣೆಯಲ್ಲಿ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳುವ ಮೂಲಕ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಹೆಚ್ಚು ಹೆಚ್ಚು ಕೆಲಸ ಮಾಡಬೇಕು. ಈ ಮೂಲಕ ಶೋಷಿತ ಸಮುದಾಯಗಳ ಬಲವರ್ಧನೆಗೆ ಮುಂದಾಗುವಂತೆ ಸೂಚಿಸಿದರು.
ಇಲಾಖೆ ಅನುದಾನದಲ್ಲಿ ಶೇ 24 ರಷ್ಟು ಅನುದಾನವನ್ನು ಮೀಸಲಿಡುವ ಮೂಲಕ ಪರಿಶಿಷ್ಟ ಜಾತಿ ಹಾಗೂ ಸಮುದಾಯಗಳ ಜನಾಂಗಕ್ಕೆ ಬಳಕೆ ಮಾಡಬೇಕು. 2013 ರಲ್ಲಿಯೇ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗಾಗಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸಲಾಗಿದ್ದು ನಿರ್ದಿಷ್ಟ ಪಡಿಸಿದ ಇಲಾಖಾ ಅನುದಾನವನ್ನು ನಿಗದಿತ ವೇಳೆಯಲ್ಲಿಯೇ ವೆಚ್ಚ ಮಾಡಬೇಕು. ಸರ್ಕಾರದ ನೀಡಿದ ಪ್ರತಿ ಒಂದು ರೂಪಾಯಿಯೂ ಅಪವ್ಯಯವಾಗದಂತೆ ಸದ್ಭಳಕೆಯಾಗಲಿ ಎಂದರು.ಸಾಮಾಜಿಕ ಅಸಮಾನತೆಯನ್ನು ಸಮತೋಲನ ಮಾಡಲು ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಬೇಕು. ದುರ್ಬಲ ವರ್ಗಕ್ಕೆ ಯಾವ ರೀತಿ ಯೋಜನೆ ನಿರ್ಮಿಸಿ ಮೇಲೆತ್ತಬೇಕೆಂಬುದನ್ನು ಅರಿತು ಸರ್ವ ಸಮಾನತೆಗಾಗಿ ಅಧಿಕಾರಿ ವರ್ಗ ಶ್ರಮಿಸಬೇಕು ಎಂದರು.
ಸಮಾಜ ಕಲ್ಯಾಣಾಧಿಕಾರಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಪಂಗಡದ ಕಾಮಗಾರಿಗಳ ಅನುಷ್ಟಾನವನ್ನು ಜಂಟಿಯಾಗಿ ಪರಿಶೀಲನೆ ನಡೆಸುವ ಮೂಲಕ ವರದಿ ಸಲ್ಲಿಸಬೇಕು. ಕಾಮಗಾರಿಗಳು ನಿರ್ದಿಷ್ಟ ಪಡಿಸಿದ ಗುಣಮಟ್ಟದ ಸಲಕರಣೆಗಳನ್ನು ಬಳಕೆಯಾಗಿದೆ ಎಂಬುದರ ಕುರಿತು ಪರಿಶೀಲನೆ ನಡೆಸಿ ವರದಿಯಲ್ಲಿ ಉಲ್ಲೇಖಿಸಬೇಕು ಎಂದರು.
ಜಿಲ್ಲೆಯಲ್ಲಿ ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯಡಿ ನಿವೇಶನ ಹಾಗೂ ವಸತಿ ಇಲ್ಲದ ದೇವದಾಸಿಯರನ್ನು ಗುರುತಿಸಿ ಅವರಿಗೆ ಜಿಲ್ಲಾಡಳಿತದಿಂದ ಸಮರ್ಪಕವಾಗಿ ಪುನರ್ವಸತಿ ಕಲ್ಪಿಸುವ ಕಾರ್ಯವಾಗಬೇಕು. ಇದನ್ನು ಆದ್ಯತೆ ಮೇರೆಗೆ ಜಿಲ್ಲಾಡಳಿತ ನಿರ್ವಹಿಸುವಂತೆ ತಿಳಿಸಿದರು. ಅದೇ ರೀತಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಇರುವ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಅಪೌಷ್ಟಿಕತೆ ನಿವಾರಣೆಗೆ ಮುಂದಾಗಬೇಕೇಂದರು.
ಇದನ್ನೂ ಓದಿ: ಆಭರಣ ಪ್ರಿಯರಿಗೆ ಸಂತಸದ ಸುದ್ದಿ.. ಮತ್ತಷ್ಟು ಇಳಿಕೆಯಾದ ಚಿನ್ನದ ಬೆಲೆ! ಇಂದಿನ ದರ ಹೀಗಿದೆ..
ಎಸ್.ಸಿ.ಎಸ್.ಟಿ. ಕಾಲೋನಿಯಿಂದ ನಿಗದಿತ ದೂರದಲ್ಲಿ ಮದ್ಯದ ಅಂಗಡಿಗಳು ಇರದಂತೆ ನಿಗಾ ವಹಿಸಿ ಮತ್ತು ಅಕ್ರಮ ಮದ್ಯ ಮಾರಾಟ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಪ್ಯಾಕೇಜ್ ಟೆಂಡರ್ ಸಿಸ್ಟೆಮ್ ಆಗದಂತೆ ಜಿಲ್ಲಾಡಳಿತ ನಿಗಾ ವಹಿಸಬೇಕು.ವಿವಿಧ ಕಾಮಗಾರಿಗಳನ್ನು ಒಂದೇ ಟೆಂಡರ್‍ನಲ್ಲಿ ಕರೆಯುವ ಮೂಲಕ ಎಸ್.ಸಿ.ಎಸ್.ಟಿ. ಸಮುದಾಯಕ್ಕೆ ನೀಡಬೇಕಾದ ಟೆಂಡರ್‍ಗಳು ಕೈ ತಪ್ಪುತ್ತಿವೆ. ಈ ಬಗ್ಗೆ ಜಾಗೃತೆ ವಹಿಸುವಂತೆ ಸೂಚಿಸಿದರು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ, ಸ್ವಚ್ಛ ಭಾರತ ಮಿಷನ ವೈಯಕ್ತಿಕ ಗೃಹ ಶೌಚಾಲಯ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳು ಈ ಯೋಜನೆಯ ಸೌಲಭ್ಯ ಪಡೆದಿದ್ದಾರೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ತಿಳಿಸಿದರು.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ್‍ಜೀವನ ಮಿಷನ್ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳು ಈ ಯೋಜನೆಯ ಸೌಲಭ್ಯ ಪಡೆದಿದ್ದಾರೆ ಎಂದು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಜಗದೀಶ ಅವರು ಸಭೆಗೆ ತಿಳಿಸಿದರು.
ಸಭೆಯಲ್ಲಿ ಸಮಿತಿಯ ಕಾರ್ಯದರ್ಶಿ ಸೇರಿದಂತೆ ಸದಸ್ಯರಾದ ಅಬ್ಬಯ್ಯ ಪ್ರಸಾದ್, ಬಸವರಾಜ ಮತ್ತಿಮುಡ, ಬಿ.ದೇವೆಂದ್ರಪ್ಪ, ಕೆ.ಸಿ. ವೀರೇಂದ್ರ ಪಪ್ಪಿ, ಕೃಷ್ಣ ನಾಯ್ಕ,ಕೆ., ಎನ್. ರವಿಕುಮಾರ್, ದುರ್ಯೋಧನ ಎಂ.ಐಹೊಳೆ, ಡಾ.ಎಂ ಚಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್, ಧಾರವಾಡ ಜಿಲ್ಲಾದಿಕಾರಿ ದಿವ್ಯ ಪ್ರಭು, ಮಹಾನಗರ ಪೋಲಿಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪ ಟಿ.ಕೆ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ, ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ