ಬೆಂಗಳೂರು: "ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಇದನ್ನು ಮನವಿಯಾಗಿಯಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಪಥ್ಯ ಮಾಡುವುದೆಲ್ಲ ಬೇಡ.. ಊಟಕ್ಕೂ ಮೊದಲು ಈ ಹಣ್ಣು ತಿಂದ್ರೆ ಸಾಕು ಶುಗರ್‌ ಎಷ್ಟೇ ಇದ್ದರೂ ಕ್ಷಣಾರ್ಧದಲ್ಲಿ ನಾರ್ಮಲ್‌ ಆಗುತ್ತೆ!


ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮಾಧ್ಯಮಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. "ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯ ಕಾಪಾಡಬೇಕು"ಎಂದು ತಿಳಿಸಿದರು.


"ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 7 ದಿನ ಶೋಕಾಚಾರಣೆ ಘೋಷಣೆ ಮಾಡಿದ್ದು, ಕೇವಲ ಸರ್ಕಾರಿ ಕಾರ್ಯಕ್ರಮಗಳನ್ನು ಮಾತ್ರ ತಡೆ ಹಿಡಿಯಲಾಗಿದೆ. ಅದರ ಹೊರತಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೀಗಾಗಿ ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು" ಎಂದರು.


ಇದನ್ನೂ ಓದಿ: BBK11: 90ನೇ ದಿನಕ್ಕೆ ಕಾಲಿಟ್ಟ ಬಿಗ್ ​ಬಾಸ್; ಡಬಲ್‌ ಎಲಿಮೇಷನ್‌ ಆದ್ರೆ ಹೊರ ಹೋಗೋದು ಇವರೇ ಅಂತೆ!!


"ಹೊಸವರ್ಷಾಚರಣೆ ಮಾರ್ಗಸೂಚಿ, ಸಮಯಾವಕಾಶದ ಬಗ್ಗೆ ಪೊಲೀಸರು ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇರಬೇಕು. ಪಾಲಿಕೆ ಹಾಗೂ ಪೊಲೀಸರು ವ್ಯಾಪಾರಸ್ಥರಿಗೆ ಮಾರ್ಗಸೂಚಿ ನೀಡಲಿದ್ದಾರೆ. ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ" ಎಂದು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ