ಬೆಂಗಳೂರು: ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಅವರು, ‘ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ’ವೆಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

‘ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಲೆ-ಕಾಲೇಜುಗಳ ಹಾಸ್ಟೆಲ್‌ಗಳಲ್ಲಿಯೂ ಈ ಬಗ್ಗೆ ನಿಗಾವಹಿಸುವಂತೆ ಸಮಾಜ ಕಲ್ಯಾಣ ಸಚಿವರಿಗೂ ತಿಳಿಸಿದ್ದೇನೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ರಾಜಕೀಯ ಲಾಭಕ್ಕಾಗಿ ಹಿಜಾಬ್ ಪ್ರಸ್ತಾಪ ಖಂಡನೀಯ: ಬಸವರಾಜ ಬೊಮ್ಮಾಯಿ


‘ಪ್ರತಿಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಬೇಕು. ಅವುಗಳನ್ನು ಪ್ರತಿದಿನ ಶುಚಿಗೊಳಿಸಲು ಸಿಬ್ಬಂದಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಒಂದು ಸಮೀಕ್ಷೆ ನಡೆಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿ ತರಿಸುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ತಿಳಿಸಿದ್ದೇನೆ’ ಎಂದು ಸಿಎಂ ಹೇಳಿದ್ದಾರೆ.


ಮಕ್ಕಳು ಶೌಚಾಲಯ ತೊಳೆಯುವ ವಿಡಿಯೋ ವೈರಲ್!


ಸಿಲಿಕಾನ್ ಸಿಟಿ ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸುವುದು ಮತ್ತು ಶಿಕ್ಷಕರ ಎಂಚಲು ತಟ್ಟೆ ತೊಳಿಸಿರುವ ಘಟನೆ ನಡೆದಿದೆ. ಮಕ್ಕಳು ಶೌಚಾಲಯ ತೊಳೆಯುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಬಗ್ಗೆ ರಾಜ್ಯದಲ್ಲಿ ವ್ಯಾಪಕ ಚರ್ಚೆಯಾಗಿದ್ದು, ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯನವರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


ಇದನ್ನೂ ಓದಿಸಿಎಂ ಸಿದ್ದರಾಮಯ್ಯರಿಂದ ಅಲ್ಪಸಂಖ್ಯಾತರ ಓಲೈಕೆ-ರಾಜ್ಯ BJP ಆಕ್ರೋಶ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.