ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಜಮಾವಣೆಗೆ ವಿದ್ಯಾರ್ಥಿಗಳು ಈ ಕೆಲಸವನ್ನು ಮಾಡಲೇಬೇಕು..!
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21ರ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಪಾವತಿಯಾಗದೇ ಇರುವ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21ರ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಪಾವತಿಯಾಗದೇ ಇರುವ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ : GST Hike: Fashion ಪ್ರಿಯರಿಗೊಂದು ಕಹಿ ಸುದ್ದಿ
2020-21 ನೇ ಸಾಲಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು (ಶುಲ್ಕ ವಿನಾಯಿತಿ) ಜಿಲ್ಲೆಯ ಒಟ್ಟು 17430 ವಿದ್ಯಾರ್ಥಿಗಳಿಗೆ ಮಂಜೂರಾತಿ ಮಾಡಲಾಗಿದ್ದು, ಇದರಲ್ಲಿ 15784 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವಿದ್ಯಾರ್ಥಿ ವೇತನ ಜಮಾ ಆಗಿರುತ್ತದೆ.ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಎನ್.ಪಿ.ಸಿ.ಐ ನ್ನು ಸೀಡಿಂಗ್ ಮಾಡದೇ ಇರುವ 1379 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವಿದ್ಯಾರ್ಥಿವೇತನ ಜಮಾ ಆಗುತ್ತಿಲ್ಲ.ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯಲ್ಲಿ ಆಧಾರ ಸೀಡಿಂಗ್ ಮಾಡಿಸಲು ನ. 30 ಕೊನೆಯದಿನವಾಗಿದೆ.
ಇದನ್ನೂ ಓದಿ : SBI Alert : ತಪ್ಪಿ ನೀವೇನಾದರೂ ಮಾಡಿಬಿಟ್ಟರೆ ಈ ಕೆಲಸ, ಖಾಲಿಯಾಗಿ ಬಿಡುತ್ತದೆ ನಿಮ್ಮ ಅಕೌಂಟ್
ಈವರೆಗೆ ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಎನ್.ಪಿ.ಸಿ.ಐ ನ್ನು ಸೀಡಿಂಗ್ ಮಾಡದೇ ಇರುವ ವಿದ್ಯಾರ್ಥಿಗಳು ನ. 30 ರೊಳಗಾಗಿ ಆಧಾರ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಎನ್.ಪಿ.ಸಿ.ಐ. ನಲ್ಲಿ ಸೀಡಿಂಗ್ ಆಗದೇ ಇರುವ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯಲ್ಲಿ ಆಧಾರ ಸೀಡಿಂಗ್ ಮಾಡಿಸಬೇಕು. ಒಂದು ವೇಳೆ ಆಧಾರ ಸೀಡಿಂಗ್ ಆಗದೇ ಇರುವ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಅರ್ಜಿಯನ್ನು ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.