ಬೆಂಗಳೂರು: ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ಇಂದಿನಿಂದ(ಮಾರ್ಚ್ 28) ಪ್ರಾರಂಭವಾಗಿರುವ SSLC ಪರೀಕ್ಷೆ(SSLC Exam 2022) ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿರುವ ಎಚ್‍ಡಿಕೆ ಹಿಜಾಬ್ ವಿವಾದ ವಿಚಾರವಾಗಿಯೂ ಟ್ವೀಟ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

‘ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ(SSLC Exam) ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂಬುದು ನನ್ನ ಕಳಕಳಿ’ ಅಂತಾ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಹಿಂದುತ್ವದ ವಿರುದ್ಧ ನಿಂತವರಿಗೆ ಮಾತ್ರ ಕಾಂಗ್ರೆಸ್ ಪಕ್ಷದ ಪ್ರಮುಖ ಜವಾಬ್ದಾರಿ: ಬಿಜೆಪಿ ಆರೋಪ


‘ಕಳೆದ ಕೆಲ ದಿನಗಳಲ್ಲಿ ಉಂಟಾದ ಅಹಿತಕರ ಘಟನೆ(Karnataka Hijab Row)ಗಳ ಬಗ್ಗೆ ಮಕ್ಕಳು ತಲೆಕೆಡಿಸಿಕೊಳ್ಳುವುದು ಬೇಡ. ಭವಿಷ್ಯ ಮುಖ್ಯ ಎಂಬುದನ್ನು ಎಲ್ಲರೂ ಮನಗಾಣಬೇಕು. ಪೋಷಕರು ಕೂಡ ನಿರ್ಲಕ್ಷ್ಯ ಮಾಡಬಾರದು. ಎಳೆ ಮನಸ್ಸಿನ ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ’ವೆಂದು ಅವರು ಮನವಿ ಮಾಡಿದ್ದಾರೆ.


‘ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆ ತಪ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಮಕ್ಕಳ ಭಾವನೆಗಳನ್ನು ಗೌರವಿಸಿ ಉಂಟಾಗಿರುವ ದ್ವೇಷಮಯ ವಾತಾವರಣವನ್ನು ತಿಳಿಗೊಳಿಸುವ ಸಂದರ್ಭ ಬಂದೇ ಬರುತ್ತದೆ’ ಎಂದು ಹೇಳಿದ್ದಾರೆ.


BS Yediyurappa: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಸಿಬಿಗೆ ದೂರು


‘ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ. ‘ಬೇಟಿ ಬಚಾವೋ, ಬೇಟಿ ಪಡಾವೋʼ(Beti Bachao Beti Padhao) ಕಾರ್ಯಕ್ರಮ ಕೇವಲ ಕಾಗದ ಮೇಲೆ ಅಥವಾ ಭಾಷಣಕ್ಕೆ ಮಾತ್ರ ಸೀಮಿತವಾಗಬಾರದು. ಹೆಣ್ಣುಮಗುವಿಗೆ ಶಿಕ್ಷಣ ಕೊಡದಿದ್ದರೆ ದೇಶವನ್ನು ಕತ್ತಲೆಗೆ ದೂಡಿದಂತೆ ಎನ್ನುವುದನ್ನು ಯಾರೂ ಮರೆಯಬಾರದು’ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.    


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.