ಬಳ್ಳಾರಿ: ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದುಕೊಂಡು, ಹೆಚ್ಚು ಹೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ಜಾಗತಿಕ ಪ್ರಪಂಚಕ್ಕೆ ಅಭಿವೃದ್ಧಿಯ ಕೊಡುಗೆಗಳನ್ನು ನೀಡಲು ಮುಂದಾಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಹೇಳಿದರು.


COMMERCIAL BREAK
SCROLL TO CONTINUE READING

ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮಂದಿರರಲ್ಲಿ ಶುಕ್ರವಾರ ಏರ್ಪಡಿಸಿದ್ದ 12 ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


2010 ರಲ್ಲಿ ಸ್ಥಾಪನೆಗೊಂಡ ವಿಜಯನಗರ ಶ್ರೀಕೃಷ್ಣದೇವರಾಯ ವಿದ್ಯಾಲಯವು, ತನ್ನ ವ್ಯಾಪ್ತಿಯಲ್ಲಿ ಸುಮಾರು 76 ಸ್ನಾತಕ, ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಸಂಯೋಜಿತಗೊಳಿಸಿಕೊಂಡಿದ್ದು, ಸುಮಾರು 60 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುತ್ತಿದ್ದಾರೆ.


ರಾಜ್ಯದಲ್ಲಿ ಪೂರ್ವ ಇತಿಹಾಸವುಳ್ಳ ವಿಶ್ವವಿದ್ಯಾಲಯಗಳಿವೆ. ಅದರಲ್ಲಿ ಮೈಸೂರು, ಧಾರವಾಡ, ಗುಲ್ಬರ್ಗಾ ಮತ್ತು ಮಂಗಳೂರು ವಿಶ್ವವಿದ್ಯಾಲಯಗಳು ಹೆಸರು ಗಳಿಸಿದಂತವುಗಳಾಗಿವೆ. ಇತ್ತೀಚೆಗೆ ಚಾಮರಾಜನಗರ, ಕೊಡಗು ಮತ್ತು ಮಂಡ್ಯ ವಿಶ್ವವಿದ್ಯಾಲಯಗಳೂ ಸ್ಥಾಪನೆಗೊಂಡಿವೆ ಎಂದರು.


ಬಳ್ಳಾರಿ ಭಾಗವು ಸ್ವತಂತ್ರ ಪೂರ್ವದಲ್ಲಿಯೇ ಕೈಗಾರಿಕೆಗಳಿಗೆ ಹೆಸರುವಾಸಿಯಾಗಿದೆ. ಅಖಂಡ ಬಳ್ಳಾರಿ ಜಿಲ್ಲೆಯ ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯರ ಆಡಳಿತಾವಧಿಯಲ್ಲಿ ಹಂಪಿಯು ವಿಶ್ವದಲ್ಲಿಯೇ ತನ್ನ ಗರಿಮೆಯನ್ನು ಬಿಂಬಿಸಿಕೊಂಡಿತ್ತು. ಇವೆಲ್ಲವುಗಳನ್ನು ಚರಿತ್ರೆಯ ಪುಟಗಳಲ್ಲಿ ಕಾಣಬಹುದಾಗಿದೆ. ಮುಂದಿನ ಭವ್ಯ-ಭಾರತದ ನಿರ್ಮಾಣಕ್ಕೆ ಇಲ್ಲಿನ ಸಮೃದ್ಧ ಖನಿಜಗಳನ್ನು ಬಳಸಿಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಆಲೋಚಿಸಬೇಕಿದೆ ಎಂದು ಹೇಳಿದರು.


ಇದನ್ನೂ ಓದಿ: ಮುಡಾ ಹಗರಣ ಡೈವರ್ಟ್ ಮಾಡಲು ರಾಜ್ಯ ಸರ್ಕಾರ ಯತ್ನ


ಜಾಗತಿಕ ವಿದ್ಯಮಾನದಲ್ಲಿ ಪದವಿ ಪಡೆದು ಹೊರಬರುವ ಯುವ ಸಮುದಾಯಕ್ಕೆ ಉದ್ಯೋಗ ಸೃಷ್ಠಿಸಲು ಶೈಕ್ಷಣಿಕ ಪಟ್ಟಿಗಳಲ್ಲಿ ಬದಲಾವಣೆಯ ಪೂರಕ ವಿಷಯಗಳನ್ನು ಅಳವಡಿಸುವ ಅಗತ್ಯ ಕಾರ್ಯವಾಗಬೇಕಿದೆ ಎಂದು ತಿಳಿಸಿದರು.


ವಿಶೇಷವಾಗಿ ಬಳ್ಳಾರಿ ಭಾಗದಲ್ಲಿ ಮೈನಿಂಗ್ ಮತ್ತು ಸ್ಟೀಲ್ ಕಾರ್ಖಾನೆಗಳಿದ್ದು, ಪರಿಣಿತರಿಂದ ಸಲಹೆ ಪಡೆದು, ಈ ವಿಶ್ವವಿದ್ಯಾಲಯದಲ್ಲಿ ಪೂರಕವಾದ ‘ಸಂಶೋಧನಾ ಕೇಂದ್ರ’ ಆರಂಭಿಸಲು ಕುಲಪತಿಯವರು ಕ್ರಮವಹಿಸಬೇಕು. ಕೌಶಲ್ಯ ತರಬೇತಿಗೆ ಹೆಚ್ಚು ನೀಡಬೇಕಿದೆ. ಇದರಿಂದ ಹೆಚ್ಚೆಚ್ಚು ಉದ್ಯೋಗಾವಕಾಶಗಳು ಸೃಷ್ಠಿಯಾಗಲಿವೆ. ಹಾಗಾಗಿ ನಮ್ಮ ಸರ್ಕಾರವು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಈ ಭಾಗದಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಅಸ್ತು ನೀಡಲಾಗಿದೆ ಎಂದು ತಿಳಿಸಿದರು.


ಈ ಭಾಗದಲ್ಲಿ ದೊರಕುವ ಸಂಪನ್ಮೂಲ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕಿದೆ. ವಿದ್ಯಾರ್ಥಿಗಳು ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಧೃತಿಗೆಡದೇ ಆತ್ಮಸ್ಥೆöÊರ್ಯದಿಂದ ಮುನ್ನಡೆದು, ಸಾಧನೆಯ ಕೈಗನ್ನಡಿಯಾಗಬೇಕು. ಹಲವಾರು ಸಾಧಕರು ಸೋಲು-ಗೆಲುವುಗಳನ್ನು ಮೆಟ್ಟಿನಿಂತು ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.


ಇದನ್ನೂ ಓದಿ: ನಟ ದರ್ಶನ್‌ನನ್ನ ಆದರ್ಶವಾಗಿ ತೆಗೆಕೊಂಡು ಮತ್ತೊಬ್ಬಳ ಜೊತೆ ಸಂಗ..! ಪತಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ


ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆಯನ್ನು ಅರಿಯಬೇಕು. ಧೈರ್ಯವಾಗಿ ಮುನ್ನಡೆಯಬೇಕು ಎಂದು ಯುವ ಸಮುದಾಯಕ್ಕೆ ಕಿವಿಮಾತು ಹೇಳಿದರು.


ಹಿರಿಯ ವಿಜ್ಞಾನಿ ಮತ್ತು ಧಾರವಾಡ ಐಐಟಿಯ ಡೀನ್ ಹಾಗೂ ಗೌರವ ಪ್ರಾಧ್ಯಾಪಕರಾದ ಪ್ರೊ.ಎಸ್.ಎಂ.ಶಿವಪ್ರಸಾದ್ ಅವರು ಘಟಿಕೋತ್ಸವದ ಭಾಷಣದಲ್ಲಿ ಮಾತನಾಡಿ, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಜ್ಞಾನದ ಜ್ಯೋತಿಯಾಗಿ ಬೆಳಗುತ್ತಿದ್ದು, ಯುವಜನರನ್ನು ಸಬಲೀಕರಣಗೊಳಿಸುವ ದೃಷ್ಠಿಯೊಂದಿಗೆ ಸ್ಥಾಪಿತವಾಗಿ, ಹೊಸತನ ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸುವ ಶೈಕ್ಷಣಿಕ ಉತ್ಕೃಷ್ಟತೆಯ ಕೇಂದ್ರವಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು.


ಬಳ್ಳಾರಿ ಜಿಲ್ಲೆಯು ಶ್ರೀಮಂತ ಪರಂಪರೆ ಹೊಂದಿದ್ದು, ಶಿಕ್ಷಣ ಮತ್ತು ಉದ್ಯಮದ ನಡುವಿನ ಸಹಜೀವನದ ಸಂಬಂಧವನ್ನು ಗುರುತಿಸಿ, ಪ್ರತಿಭೆಯನ್ನು ಪೋಷಿಸುವಲ್ಲಿ ವಿಶ್ವವಿದ್ಯಾಲಯವು ತನ್ನದೇ ಆದ ಪಾತ್ರವನ್ನು ಹೊಂದಿದೆ ಎಂದು ಬಿಂಬಿಸಿದರು.


ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಬಳಸಿಕೊಳ್ಳಲು ಅನುವು ಮಾಡಿಕೊಡುವ ಅನುಭವದ ಕಲಿಕೆ, ಸ್ವಂತ ಅನುಭವ ಹಾಗೂ ಪ್ರಯೋಗಗಳು ತಂತ್ರಜ್ಞಾನದ ಅನುಗುಣವಾಗಿ ಪಠ್ಯಕ್ರಮವನ್ನು ವಿನ್ಯಾಸ ಮಾಡಬೇಕಿದೆ. ಇದರ ಜೊತೆಗೆ ಮಾನವ ಮತ್ತು ಸಾಮಾಜಿಕ ಮೌಲ್ಯಗಳೊಂದಿಗೆ ಸಂವಹನ, ಸಹಯೋಗ ಹಾಗೂ ಹೊಂದಾಣಿಕೆಯAತಹ ಮೃದು ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಲು ಸಮಾನ ಆದ್ಯತೆ ನೀಡಬೇಕಾಗಿದೆ ಎಂದು ಅಭಿಪ್ರಾಯ ಪಟ್ಟರು.


ಈ ಭಾಗದಲ್ಲಿ ಉಕ್ಕಿನ ಗಣಿಗಾರಿಕೆ ಮತ್ತು ಉದ್ಯಮವು ಉದಯೋನ್ಮುಖ ತಂತ್ರಜ್ಞಾನಗಳಿAದಾಗಿ ಅಗಾಧವಾದ ರೂಪಾಂತರಗಳಿಗೆ ಒಳಗಾಗುತ್ತಿದ್ದು, ವಿಶ್ವವಿದ್ಯಾಲಯವು ಈ ಅವಕಾಶವನ್ನು ಬಳಸಿಕೊಂಡು ನಿರ್ದಿಷ್ಟವಾಗಿ ಪ್ರದೇಶದ ಬೆಳವಣಿಗೆಗಾಗಿ ಮತ್ತು ಸಾಮಾನ್ಯವಾಗಿ ನವ ಭಾರತದ ಬೆಳವಣಿಗೆಗೆ ಕೊಡುಗೆಯನ್ನು ನೀಡಲು ಬಳಸಿಕೊಳ್ಳಬೇಕು ಎಂದು ಹೇಳಿದರು.


ಇದನ್ನೂ ಓದಿ: ನಟ ದರ್ಶನ್‌ನನ್ನ ಆದರ್ಶವಾಗಿ ತೆಗೆಕೊಂಡು ಮತ್ತೊಬ್ಬಳ ಜೊತೆ ಸಂಗ..! ಪತಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ


ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.


ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ರುದ್ರೇಶ್.ಎಸ್.ಎನ್., ಕುಲಸಚಿವ (ಮೌಲ್ಯಮಾಪನ) ಪ್ರೊ.ರಮೇಶ್ ಓ ಓಲೇಕಾರ, ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು, ಎಲ್ಲ ನಿಕಾಯದ ಡೀನರು, ಮುಖ್ಯಸ್ಥರುಗಳು, ಸಂಯೋಜಕರುಗಳು, ವಿವಿಧ ಮಹಾವಿದ್ಯಾಲಯಗಳ ಪಾಂಶುಪಾಲರಾಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮುಂತಾದ ಗಣ್ಯರು ಹಾಜರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ