ಹಿಂದಿ ಭಾಷೆ ಗೊತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಪ್ರವಾಸ ಭಾಗ್ಯ..!
ಒಂದು ಭಾರತ ಶ್ರೇಷ್ಟ ಭಾರತ ಕಾರ್ಯಕ್ರಮದಡಿ ಶಿಕ್ಷಣ ಇಲಾಖೆ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿ ಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಯೋಜನೆಯನ್ನು ಹಾಕಿಕೊಂಡಿದೆ. ಆದರೆ ಈ ಯೋಜನೆಯೇ ಇದೀಗ ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರು : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಒಂದು ಭಾರತ ಶ್ರೇಷ್ಟ ಭಾರತ ಕಾರ್ಯಕ್ರಮದಡಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿ ಗಳಿಗೆ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಹಿಂದಿ ಭಾಷೆ ತಿಳಿದಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಪ್ರವಾಸದಲ್ಲಿ ಪಾಲ್ಗೊಳ್ಳುವ ಅವಕಾಶವಿದೆ.
ಒಂದು ಭಾರತ ಶ್ರೇಷ್ಟ ಭಾರತ ಕಾರ್ಯಕ್ರಮದಡಿ ಶಿಕ್ಷಣ ಇಲಾಖೆ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿ ಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಯೋಜನೆಯನ್ನು ಹಾಕಿಕೊಂಡಿದೆ. ಆದರೆ ಈ ಯೋಜನೆಯೇ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಪ್ರವಾಸದಲ್ಲಿ ಪಾಲ್ಗೊಳ್ಳಬೇಕಾದರೆ ವಿದ್ಯಾರ್ಥಿ ಗಳಿಗೆ ಹಿಂದಿ ಭಾಷೆ ಗಗೊತ್ತಿರಬೇಕು ಎನ್ನಲಾಗಿದೆ. ಹಿಂದಿ ಬರುವ ವಿದ್ಯಾರ್ಥಿಗಳಿಗೆ ಮಾತ್ರ ಆದ್ಯತೆ ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವು ವಿವಾದಕ್ಕೆ ಕಾರಣವಾಗಿದೆ.
ಇದನ್ನೂ ಓದಿ : Lokayukta: ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್.ಪಾಟೀಲ್ ಪ್ರಮಾಣ ವಚನ ಸ್ವೀಕಾರ
ಹಿಂದಿ ಬಲ್ಲ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ ಕಲ್ಪಿಸಿರುವುದು ಇದೀಗ ಕನ್ನಡ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಕೇಂದ್ರ ಸರ್ಕಾರ ಈ ಸೂಚನೆ ನೀಡದೆ ಹೋದರೂ ರಾಜ್ಯ ಸರ್ಕಾರ ಯಾಕೆ ಈ ನಿರ್ಧಾರ ತೆಗೆದುಕೊಂಡಿದೆ ಎನ್ನುವ ಪ್ರಶ್ನೆ ಎದ್ದಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕನ್ನಡ ಪರ ಸಂಘಟನೆಗಳು ಕಿಡಿ ಕಾರಿವೆ.
[[{"fid":"244312","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]
ಇದನ್ನೂ ಓದಿ : ರಾಷ್ಟ್ರ ಪತಿ ಚುನಾವಣೆ ಹಿನ್ನೆಲೆ : ಇಂದು ಪ್ರಾದೇಶಿಕ ಪಕ್ಷಗಳ ನಾಯಕರ ಸಭೆ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.