ಶಿವಮೊಗ್ಗದಲ್ಲಿ ಕೊರೊನಾ ಸ್ಫೋಟ: ಖಾಸಗಿ ನರ್ಸಿಂಗ್ ಕಾಲೇಜಿನ 29 ವಿದ್ಯಾರ್ಥಿಗಳಿಗೆ COVID-19 ಪಾಸಿಟಿವ್

Corona in Shimogga: ರ್ಯಾಂಡಮ್ ಪರೀಕ್ಷೆ ವೇಳೆ ಶಿವಮೊಗ್ಗದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ 29 ವಿದ್ಯಾರ್ಥಿಗಳಿಗೆ COVID-19 ಪಾಸಿಟಿವ್ ಕಂಡುಬಂದಿದೆ. ಸೋಂಕು ಹರಡುವಿಕೆ ತಡೆಯಲು ನಾವು ಈ ಪ್ರದೇಶದ ಸುತ್ತಮುತ್ತಲಿನ ಜನರ ಮಾದರಿಗಳನ್ನು ಸಹ ಪರೀಕ್ಷಿಸಲಾಗುತ್ತಿದೆ  ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.  

Edited by - ZH Kannada Desk | Last Updated : Dec 5, 2021, 09:37 AM IST
  • ಶಿವಮೊಗ್ಗದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ 29 ವಿದ್ಯಾರ್ಥಿಗಳಿಗೆ COVID-19 ಪಾಸಿಟಿವ್
  • ಸೋಂಕು ಹರಡುವಿಕೆ ತಡೆಯಲು ಈ ಪ್ರದೇಶದ ಸುತ್ತಮುತ್ತಲಿನ ಜನರ ಮಾದರಿ ಸಹ ಪರೀಕ್ಷೆ
  • ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ
ಶಿವಮೊಗ್ಗದಲ್ಲಿ ಕೊರೊನಾ ಸ್ಫೋಟ: ಖಾಸಗಿ ನರ್ಸಿಂಗ್ ಕಾಲೇಜಿನ 29 ವಿದ್ಯಾರ್ಥಿಗಳಿಗೆ COVID-19 ಪಾಸಿಟಿವ್

ಶಿವಮೊಗ್ಗ: ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ 29 ವಿದ್ಯಾರ್ಥಿಗಳಿಗೆ COVID-19 ಪಾಸಿಟಿವ್ ಕಂಡುಬಂದಿದೆ. ಅವರಲ್ಲಿ ಹೆಚ್ಚಿನವರು ಲಕ್ಷಣರಹಿತರಾಗಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ನಾವು ಅನೇಕ ಸ್ಥಳಗಳಲ್ಲಿ ರ್ಯಾಂಡಮ್ ಪರೀಕ್ಷೆಯನ್ನು (random sampling) ನಡೆಸುತ್ತಿದ್ದೇವೆ. ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿವಿಧ ರಾಜ್ಯಗಳಿಂದ ಬಂದ ಕೆಲವು ವಿದ್ಯಾರ್ಥಿಗಳು ಕೋವಿಡ್ ಸೋಂಕಿಗೆ (Corona in Shimogga) ಒಳಗಾಗಿದ್ದಾರೆ. ನಾವು ಹಾಸ್ಟೆಲ್ ಆವರಣವನ್ನು ಮುಚ್ಚಿದ್ದೇವೆ. ಸುಮಾರು 29 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳಿದರು.

ಸೋಂಕು ಹರಡುವಿಕೆ ತಡೆಯಲು ನಾವು ಈ ಪ್ರದೇಶದ ಸುತ್ತಮುತ್ತಲಿನ ಜನರ ಮಾದರಿಗಳನ್ನು ಸಹ ಪರೀಕ್ಷಿಸಲಾಗುತ್ತಿದೆ  ಎಂದು ಹೇಳಿದರು. 

ಇದನ್ನೂ ಓದಿ: Omicron variant: ಹೊಸ ರೂಪಾಂತರದ ರೋಗಲಕ್ಷಣಗಳ ಬಗ್ಗೆ ತಜ್ಞರು ಹೇಳುವುದೇನು?

ಸೋಂಕಿನ ಹರಡುವಿಕೆಯನ್ನು ತಡೆಯುವ ಪ್ರಯತ್ನದಲ್ಲಿ, ಮೂರು ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳನ್ನು ಹೊಂದಿರುವ ಯಾವುದೇ ಪ್ರದೇಶವನ್ನು ಕ್ಲಸ್ಟರ್ ಎಂದು ವರ್ಗೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದ್ದಾರೆ.

ಏತನ್ಮಧ್ಯೆ, ಕರ್ನಾಟಕವು ಶನಿವಾರ 397 ಹೊಸ COVID-19 ಪ್ರಕರಣಗಳನ್ನು ವರದಿ ಮಾಡಿದೆ. 277 ಜನ ಗುಣಮುಖರಾಗಿದ್ದು, ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆಯ ಪ್ರಕಾರ 7,012 ಸಕ್ರಿಯ ಪ್ರಕರಣಗಳಿವೆ.

ಈ ವಾರದ ಆರಂಭದಲ್ಲಿ, ಹೊಸ COVID-19 ರೂಪಾಂತರದ Omicron ನ ಭಾರತದ ಮೊದಲ ಎರಡು ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿವೆ. ಭಾರತದಲ್ಲಿ ಇದುವರೆಗೆ ಓಮಿಕ್ರಾನ್ ಸೋಂಕಿನ ನಾಲ್ಕು ಪ್ರಕರಣಗಳು ವರದಿಯಾಗಿವೆ.

More Stories

Trending News