ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ತೆಂಗು, ಮಾವು, ಸಪೋಟ, ಬಾಳೆ, ಅಂಜೂರ, ನುಗ್ಗೆ, ಪಪ್ಪಾಯ, ಪೇರಾಲ (ಸೀಬೆ) ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಗಳನ್ನು ಮತ್ತು ಕೊಳವೆ ಬಾವಿ ಮರುಪೂರಣ ಹಾಗೂ ನೀರು ಸಂರಕ್ಷಿತ ಕಾಮಗಾರಿಗಳನ್ನು ರೈತರ ಜಮೀನಿನಲ್ಲಿ ಅನುಷ್ಠಾನಗೊಳಿಸಲಾಗುವುದು.


ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, ಗೇರು ಬೆಳೆಯ ಪ್ರದೇಶ ವಿಸ್ತರಣೆ, ರೋಗ ಮತ್ತು ಕೀಟ ನಿಯಂತ್ರಣ, ನೀರು ಸಂಗ್ರಹಣಾ ಘಟಕ, ಕೋಯ್ಲೊತ್ತರ ನಿರ್ವಹಣೆ, ಜೇನು ಕೃಷಿ ಹಾಗೂ ಇತರೆ ಘಟಕ ಗಳಿಗೆ ಸಹಾಯಧನ ನೀಡಲಾಗುವುದು.


ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ ಇದೇ ಜುಲೈ. 25 ರೊಳಗಾಗಿ ಆಯಾ ತಾಲೂಕಿನ ತೋಟಗಾರಿಕೆ ಕಚೇರಿಗಳಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿಯಂತೆ ಲಭ್ಯವಿರುವ ಅನುದಾನದ ಮೇರೆಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.