ಮಂಡ್ಯ: ನಟಿ ಸುಮಲತಾ ಅಂಬರೀಶ್ ಅವರು ಮಂಡ್ಯದ ಗೌಡತಿ ಅಲ್ಲ ಎಂದು ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿದ್ದು, ನಟ ಹಾಗೂ ಮಾಜಿ ಸಂಸದ ಅಂಬರೀಶ್ ಅಭಿಮಾನಿಗಳು ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಒತ್ತಡ ಹಾಕಿದ್ದಾರೆ. ಮತ್ತೊಂದೆಡೆ ಜೆಡಿಎಸ್ ಮುಖಂಡ, ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಸುಮಲತಾ ಸ್ಪರ್ಧೆಯನ್ನು ಟೀಕಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ. ಅವರು ಮೂಲತಃ ಆಂಧ್ರಪ್ರದೇಶದವರು. ಅಂಬರೀಶ್ ಬದುಕಿದ್ದಾಗ ರಾಜಕಾರಣ ತಮಗೇ ಕೊನೆಯಾಗಲಿ ಅಂತ ಸ್ಪಷ್ಟವಾಗಿ ಹೇಳಿದ್ದರು. ಚಿತ್ರರಂಗದಿಂದ ಬಂದವರನ್ನು ನೋಡಿ ಸಾಕಾಗಿದೆ. ರಾಜಕೀಯಕ್ಕೆ ರಮ್ಯಾ ಎಂಟ್ರಿ ಕೊಟ್ಟಿದ್ದರು. ಅವರು ಎಷ್ಟರ ಮಟ್ಟಿಗೆ ನಮ್ಮ ಕೆಲಸ ಮಾಡಿಕೊಟ್ಟರು ಅಂತ ಗೊತ್ತಾಗಿದೆ. ನಾವು ರಮ್ಯಾರಿಂದ ಪಾಠ ಕಲಿತಿದ್ದೇವೆ. ಆಂಧ್ರ ಮೂಲದ ಸುಮಲತಾ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ, ಬಳಿಕ ಅವರನ್ನು ಎಲ್ಲಿ ಹುಡುಕುತ್ತೀರಿ ಎಂದು ಕೆ.ಟಿ.ಶ್ರೀಕಂಠೇಗೌಡ ಪ್ರಶ್ನಿಸಿದ್ದಾರೆ. 


ಒಂದೆಡೆ ಜೆಡಿಎಸ್ ನಾಯಕರು ಗೌಡರ ಕುಟುಂಬದಿಂದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ನಾಯಕರು ಸುಮಲತಾ ಅಂಬರೀಶ್ ಅವರನ್ನು ಕಣಕ್ಕಿಳಿಸಲು ಒತ್ತಡ ಹೇರುತ್ತಿದ್ದಾರೆ. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರ್ಕಾರ ಇರುವುದರಿಂದ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬುದು ಭಾರೀ ಕುತೂಹಲ ಮೂಡಿಸಿದೆ.