ತಮಗೆ ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸುಮಲತಾ ಅಂಬರೀಶ್ ಏನು ಹೇಳಿದಾರೆ ಗೊತ್ತಾ?

ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು.  ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, COVID 19 ಪರೀಕ್ಷೆಗೆ ಒಳಗಾದೆ.   

Last Updated : Jul 7, 2020, 07:50 AM IST
ತಮಗೆ ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸುಮಲತಾ ಅಂಬರೀಶ್ ಏನು ಹೇಳಿದಾರೆ ಗೊತ್ತಾ? title=
File Image

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ‌‌‌‌  ಕೋವಿಡ್ -19 (COVID-19) ಪಾಸಿಟಿವ್ ಬಂದಿದ್ದು ಸದ್ಯ ಕ್ವಾರಂಟೈನ್ (Quarantine) ನಲ್ಲಿ‌ ಇದ್ದಾರೆ. ಈ ಬಗ್ಗೆ ವ್ಯಾಪಕವಾಗಿ ಚರ್ಚೆ ಆಗುತ್ತಿರುವುದರಿಂದ ಸುಮಲತಾ ಅಂಬರೀಶ್ ಅವರೇ ಈಗ ಒಂದು‌ ಸ್ಪಷ್ಟೀಕರಣ ಬಿಡುಗಡೆ ಮಾಡಿದ್ದಾರೆ. ಸುಮಲತಾ ಅಂಬರೀಶ್ ಅವರ ಮಾತುಗಳು ಹೀಗಿವೆ...

ಆತ್ಮೀಯರೆ, 
ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು.  ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕರೋನವೈರಸ್ (Coronavirus) COVID 19 ಪರೀಕ್ಷೆಗೆ ಒಳಗಾದೆ. ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ COVID 19 ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ. 

ನಿಮ್ಮ ಹಾರೈಕೆ ಇರಲಿ.
ಸುಮಲತಾ ಅಂಬರೀಷ್ (Sumalatha Ambareesh)

Trending News