ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಸುಧಾಕರ್

ಶಿರಸಿಯಲ್ಲಿ 250 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹ ನಿರ್ಮಾಣವಾಗುತ್ತಿದ್ದು, ಜಿಲ್ಲೆಯ ಆರೋಗ್ಯ ಮೂಲಸೌಕಾರ್ಯ ಹೆಚ್ಚಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

Written by - Prashobh Devanahalli | Edited by - Puttaraj K Alur | Last Updated : Sep 20, 2022, 04:14 PM IST
  • ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ಸಿಕ್ತು ಗ್ರೀನ್ ಸಿಗ್ನಲ್
  • ಕುಮಟಾದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ರಾಜ್ಯ ಸರ್ಕಾರದಿಂದ ತಾತ್ವಿಕ ಅನುಮೋದನೆ
  • ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ಸಿಕ್ತು ಮನ್ನಣೆ
ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಸುಧಾಕರ್ title=
ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನಮ್ಮ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಈ ಮೂಲಕ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ಮನ್ನಣೆ ದೊರೆತಂತಾಗಿದೆ.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ: ಪ್ರೊಟೀನ್ ಪುಡಿ ಮಾರಾಟ ಬ್ಯಾನ್ ಗೆ ಒತ್ತಾಯ; ಸೂಕ್ತ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ ಆರೋಗ್ಯ ಇಲಾಖೆ

ಉತ್ತರ ಕನ್ನಡ ಜಿಲ್ಲೆಗೆ ಉತ್ಕೃಷ್ಟವಾದ ಆರೋಗ್ಯ ಸೇವೆ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಎಲ್ಲಿ ನಿರ್ಮಿಸಬೇಕು?, ಹೇಗೆ ನಿರ್ಮಾಣ ಮಾಡಬೇಕು? ಎಂಬೆಲ್ಲ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಈ ಪ್ರಸ್ತಾವ ಆರ್ಥಿಕ ಇಲಾಖೆಯವರೆಗೆ ಹೋಗಿದೆ. ಇನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಚಿವ ಸಂಪುಟದಲ್ಲಿ ಪ್ರಸ್ತಾವ ಇರಿಸಲಾಗುವುದು ಎಂದು ತಿಳಿಸಿದರು.

ಕುಮಟ ಪ್ರದೇಶ ಉತ್ತರ ಕನ್ನಡ ಜಿಲ್ಲೆಯ ಮಧ್ಯಭಾಗದಲ್ಲಿದ್ದು, ಅಲ್ಲಿಯೇ ಆಸ್ಪತ್ರೆ ನಿರ್ಮಿಸುವ ಬಗ್ಗೆಯೂ ಚರ್ಚೆಯಾಗಿದೆ. ಶಿರಸಿಯಲ್ಲಿ ಈಗಾಗಲೇ 250 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಾಮಗಾರಿ ಭರದಿಂದ ನಡೆಯುತ್ತಿದೆ. ಕಾರವಾರದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಿದ್ದು, ಮುಂದಿನ ವರ್ಷಕ್ಕೆ ಆ ಕಾಮಗಾರಿಯೂ ಮುಗಿಯಲಿದೆ. ಅಲ್ಲಿ ಈ ವರ್ಷವೇ 150 ವಿದ್ಯಾರ್ಥಿಗಳಿಗೆ ಬೋಧಿಸಲು ಎನ್‌ಎಂಸಿಯಿಂದ ಪರವಾನಗಿ ದೊರೆತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ಕೃಷ್ಟವಾದ ಆರೋಗ್ಯ ಸೇವೆ ನೀಡುವುದು, ಆರೋಗ್ಯ ಸೇವೆ ಮೇಲ್ದರ್ಜೆಗೇರಿಸುವುದು, ಸಿಬ್ಬಂದಿ ಕೊರತೆ ನೀಗಿಸುವುದು, ಉಪಕರಣಗಳ ಪೂರೈಕೆ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಸಚವ ಸುಧಾಕರ್ ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: ಮತ್ತೆ ಪ್ರತಿಧ್ವನಿಸಿದ ಪಂಚಮಸಾಲಿ ಮೀಸಲಾತಿ, ಯತ್ನಾಳ - ಹೆಬ್ಬಾಳ್ಕರ್ ಸದನದ ಬಾವಿಗಿಳಿದು ಪ್ರತಿಭಟನೆ!

ಅಧಿವೇಶನ ಮುಗಿದ ಬಳಿಕ ಸಚಿವ ಸುಧಾಕರ್‌ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಸಚಿವ ಶಿವರಾಮ್‌ ಹೆಬ್ಬಾರ್‌, ಶಾಸಕರು ಸಭೆಯಲ್ಲಿ ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News