ಕೇರಳದ `ಜನರಕ್ಷಾ ಯಾತ್ರೆ` ಬೆಂಬಲಿಸಿ ಬೆಂಗಳೂರಿನಲ್ಲಿ ಪಾದಯಾತ್ರೆ
ಪಾದಯಾತ್ರೆಯಲ್ಲಿ ಬೃಹತ್ ಎಲ್ಇಡಿ ಪರದೆ ಬಳಕೆ, ಎಲ್ಇಡಿ ಪರದೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆ ದೃಶ್ಯ ಪ್ರಸಾರ.
ಬೆಂಗಳೂರು: ಕೇರಳದಲ್ಲಿ ಬಿಜೆಪಿ ವತಿಯಿಂದ ನಡೆಸಲಾದ 'ಜನರಕ್ಷಾ ಯಾತ್ರೆ'ಗೆ ಬೆಂಬಲಿಸಿ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪಾದಯಾತ್ರೆ ಕೈಗೊಳ್ಳಲಾಗಿದೆ.
ಪಾದಯಾತ್ರೆಯು ಬೆಂಗಳೂರಿನ ಲಾಲ್ ಬಾಗ್ ಪಶ್ಹಿಮ ದ್ವಾರದಿಂದ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಯ ವರೆಗೆ ನಡೆಯಲಿದೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕಪ್ಪು ಬಟ್ಟೆ ಕಟ್ಟಿಕೊಂಡು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಪಾದಯಾತ್ರೆಯಲ್ಲಿ ಬೃಹತ್ ಎಲ್ಇಡಿ ಪರದೆ ಬಳಕೆ ಮಾಡಲಾಗುತ್ತಿದ್ದು, ಎಲ್ಇಡಿ ಪರದೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆ ದೃಶ್ಯ ಪ್ರಸಾರ ಮಾಡಲಾಗುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಆರ್. ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ, ಸಿ.ಟಿ. ರವಿ ಮತ್ತಿತರ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆಯಲಿ ಬಾಗಿಯಾಗಿದ್ದಾರೆ.