ಕೆಂಪು ಮೆಣಸಿನಕಾಯಿಗೆ ಬೆಂಬಲ ಬೆಲೆ; ಕರ್ನಾಟಕಕ್ಕೂ ವಿಸ್ತರಿಸಲು ಸಚಿವ ಪ್ರಲ್ಹಾದ ಜೋಶಿ ಒತ್ತಾಯ

ದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರಲ್ಲದೆ, ರಾಜ್ಯದ ಕೆಂಪು ಮೆಣಸಿನಕಾಯಿ ಹಿತ ರಕ್ಷಣೆ ಬಗ್ಗೆ  ಮಹತ್ವದ ಸಮಾಲೋಚನೆ ಸಹ ನಡೆಸಿದರು.

Written by - Prashobh Devanahalli | Last Updated : Mar 11, 2025, 08:25 PM IST
    • ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಜತೆ ಚರ್ಚೆ ನಡೆಸಿ, ಮನವಿ ಸಲ್ಲಿಕೆ
    • ಕೆಂಪು ಮೆಣಸಿನಕಾಯಿ ಬೆಲೆ ಕುಸಿತದಿಂದ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದಾರೆ ರೈತರು
    • MIS (ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ)ಯಡಿ ನೆರವು ಅಗತ್ಯ
ಕೆಂಪು ಮೆಣಸಿನಕಾಯಿಗೆ ಬೆಂಬಲ ಬೆಲೆ; ಕರ್ನಾಟಕಕ್ಕೂ ವಿಸ್ತರಿಸಲು ಸಚಿವ ಪ್ರಲ್ಹಾದ ಜೋಶಿ ಒತ್ತಾಯ
File Photo

ನವದೆಹಲಿ: ಕೆಂಪು ಮೆಣಸಿನಕಾಯಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗಾಗಿ ಕರ್ನಾಟಕಕ್ಕೂ ಬೆಂಬಲ ಬೆಲೆ (MIS) ಯೋಜನೆ ವಿಸ್ತರಿಸುವಂತೆ ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.

Add Zee News as a Preferred Source

ದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರಲ್ಲದೆ, ರಾಜ್ಯದ ಕೆಂಪು ಮೆಣಸಿನಕಾಯಿ ಹಿತ ರಕ್ಷಣೆ ಬಗ್ಗೆ  ಮಹತ್ವದ ಸಮಾಲೋಚನೆ ಸಹ ನಡೆಸಿದರು.

ಇದನ್ನೂ ಓದಿ: ತುಳಸಿ ಅಲ್ಲ... ಈ ಗಿಡವನ್ನು ಪೀರಿಯಡ್ಸ್‌ ಸಮಯದಲ್ಲಿ ಮುಟ್ಟಲೇಬಾರದು! ಅಪ್ಪಿತಪ್ಪಿ ಮುಟ್ಟಿದ್ರಂತೂ ಬುಡದಿಂದಲೇ ಸತ್ತು ಹೋಗುತ್ತೆ

ರಾಜ್ಯದಲ್ಲಿ ಕೆಂಪು ಮೆಣಸಿನಕಾಯಿ ಬೆಳೆಗಾರರು ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಕುಸಿತದಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಖರೀದಿದಾರರು ಕೇಳುವಂತಹ ಕನಿಷ್ಠ ಬೆಲೆಗೆ ಮಾರಿ ರೈತರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಹಾಗಾಗಿ  ಇದಕ್ಕೆ ಪರಿಹಾರ ಮಾರ್ಗ ಕಲ್ಪಿಸಿ ಎಂದು ಕೃಷಿ ಸಚಿವರ ಗಮನ ಸೆಳೆದರು ಪ್ರಲ್ಹಾದ ಜೋಶಿ.

MIS (ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ)ಯಡಿ ನೆರವು ಅಗತ್ಯ: ಕರ್ನಾಟಕದಲ್ಲಿ ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (MIS) ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆ ಅನುಷ್ಠಾನ ಅತ್ಯಗತ್ಯವಾಗಿದೆ ಎಂದು ಕೃಷಿ ಸಚಿವರಿಗೆ ಖುದ್ದು ಮನವರಿಕೆ ಮಾಡಿಕೊಟ್ಟರು.

ಮಾರುಕಟ್ಟೆಯಲ್ಲಿನ ತೀವ್ರ ಬೆಲೆ ಕುಸಿತದಿಂದಾಗಿ ಕರ್ನಾಟಕದ ಅನೇಕ ಕೆಂಪು ಮೆಣಸಿನಕಾಯಿ ರೈತರು ಗಂಭೀರ ಸಮಸ್ಯೆ, ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ಕನಿಷ್ಠ ಬೆಲೆಗೆ ಮಾರಾಟ ಮಾಡುತ್ತಿದ್ದು, ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ ಎಂದು ಕೃಷಿ ಸಚಿವರೊಂದಿಗೆ ಕೆಲ ಕಾಲ ಮಹತ್ವದ ಚರ್ಚೆ ನಡೆಸಿದರು.

ಕರ್ನಾಟಕದ ಸಾವಿರಾರು ಸಣ್ಣ ಮತ್ತು ಅತಿ ಸಣ್ಣ ರೈತರು ಕೆಂಪು ಮೆಣಸಿನಕಾಯಿ ಕೃಷಿಯನ್ನು  ಅವಲಂಬೀಸಿದ್ದಾರೆ ಮತ್ತು ಕೆಂಪು ಮೆಣಸಿನಕಾಯಿ ಪ್ರಸ್ತುತ ಮಾರುಕಟ್ಟೆ ಬೆಲೆ ಕುಸಿತ ರೈತರನ್ನು ಚಿಂತೆಗೀಡು ಮಾಡಿದೆ. ಅನೇಕ ರೈತರನ್ನು ಸಾಲದ ಬಿಕ್ಕಟ್ಟಿಗೆ ಸಿಲುಕಿಸಿದೆ.

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (MIS) ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆಯನ್ನು ಕರ್ನಾಟಕ ರಾಜ್ಯಕ್ಕೆ ವಿಸ್ತರಿಸುವ ತುರ್ತು ಅವಶ್ಯಕತೆಯಿದ್ದು, ಈ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಿದೆ ಎಂದು ಕೃಷಿ ಸಚಿವರನ್ನು ಒತ್ತಾಯಿಸಿದರು ಸಚಿವ ಪ್ರಲ್ಹಾದ ಜೋಶಿ.

ಇದನ್ನೂ ಓದಿ: ಅರ್ಧ ತುಂಡು ಟೊಮೆಟೋಗೆ ಈ ವಸ್ತು ಬೆರೆಸಿ ಹಚ್ಚಿದ್ರೆ ಮೂರೇ ನಿಮಿಷದಲ್ಲಿ ಕಪ್ಪಾಗುತ್ತೆ ಬಿಳಿ ಕೂದಲು!

ಕೃಷಿ ಸಚಿವರ ಭರವಸೆ: ಸಚಿವ ಪ್ರಲ್ಹಾದ  ಜೋಶಿ ಅವರ ಮನವಿಗೆ ಸ್ಪಂದಿಸಿದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರ ಸಂಕಷ್ಟ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News