SSLC EXAM ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

Last Updated : Jun 17, 2020, 06:21 PM IST
SSLC EXAM ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಬೆಳಗಾವಿಯ ರಾಜಶ್ರೀ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್,ಕೃಷ್ಣ ಮುರಾರಿ ಹಾಗೂ ಎಸ್.ರವಿಂದ್ರ ಭಟ್ ಅವರ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. 

ವಿಚಾರಣೆ ಸಂದರ್ಭದಲ್ಲಿ ಸಲ್ಲಿಸಿರುವ ಅರ್ಜಿಯು ಯೋಗ್ಯವಾಗಿಲ್ಲ ರಾಜ್ಯ ಸರ್ಕಾರದ ನಿರ್ಧಾರದ ಸಂದರ್ಭದಲ್ಲಿ ಕೋರ್ಟ್ ನ ಹಸ್ತಕ್ಷೇಪ ಸರಿಯಲ್ಲ, ಈ ಮೊದಲು ಹೈಕೋರ್ಟ್ ನೀಡಿರುವ ತೀರ್ಪು ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ ನ ನ್ಯಾಯಪೀಠ ತಿಳಿಸಿದೆ.

ಈಗ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಗೆ ಅನುಗುಣವಾಗಿ ನಡೆಯಲಿವೆ ಎನ್ನಲಾಗಿದೆ.

Trending News