ನವ ದೆಹಲಿ: ಕಾವೇರಿ ನದಿ ನೀರಿನ ಹಂಚಿಕೆ ವಿವಾದದಲ್ಲಿ 2007 ಜುಲೈ 11 ರಂದು ಕರ್ನಾಟಕ, ತಮಿಳು ನಾಡು ಮತ್ತು ಕೇರಳ ರಾಜ್ಯಗಳು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಈಗಾಗಲೇ ಎಲ್ಲಾ ರಾಜ್ಯಗಳು ತಮ್ಮ ವಿವಾದವನ್ನು ಮಂಡಿಸಿದ್ದು, ಕರ್ನಾಟಕ ಪರ ವಕೀಲರಾದ ಪಾಲಿ ಎಸ್. ನಾರಿಮನ್ ಇಂದು ತಮ್ಮ ವಾದವನ್ನು ಮಂಡಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಕಾವೇರಿ ನ್ಯಾಯಾಧಿಕರಣವು 2007 ಫೆಬ್ರವರಿ 5ರಂದು ತೀರ್ಪನ್ನು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ 2007 ಜುಲೈ 11 ರಂದು ಕರ್ನಾಟಕ, ತಮಿಳು ನಾಡು ಮತ್ತು ಕೇರಳ ರಾಜ್ಯಗಳು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದವು. 


ಈ ಹಿಂದೆ ನಡಿಸಿದ್ದ ವಿಚಾರಣೆಯಲ್ಲಿ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠವು ಪ್ರತಿದಿನ 2000 ಕ್ಯೂಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಿತ್ತು.