ಮಲಿನಗೊಂಡ ಕಾವೇರಿ ನೀರು ಬಿಡುಗಡೆ ವಿಚಾರ: ಇಂದು ಸುಪ್ರೀಂ ವಿಚಾರಣೆ
ರಾಜ್ಯಕ್ಕೆ ಮಲಿನಗೊಂಡ ಕಾವೇರಿ ನೀರನ್ನು ಬಿಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕದ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರಿಂ ಕೋರ್ಟ್ ವಿಚಾರಣೆ ನಡೆಸಲಿದೆ.
ನವದೆಹಲಿ : ರಾಜ್ಯಕ್ಕೆ ಮಲಿನಗೊಂಡ ಕಾವೇರಿ ನೀರನ್ನು ಬಿಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕದ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರಿಂ ಕೋರ್ಟ್ ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಲಿದೆ.
ತಮಿಳುನಾಡಿಗೆ ಬಿಡಲಾಗುತ್ತಿರುವ ನೀರು ಮಾಲಿನ್ಯದಿಂದ ಕೂಡಿದೆ, ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಪಿಸಿ ತಮಿಳುನಾಡು ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್'ಗೆ ಅರ್ಜಿ ಸಲ್ಲಿಸಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಸ್ಥಳ-ನೀರು ಪರಿಶೀಲಿಸುವಂತೆ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.
ಅಲ್ಲದೆ, 2 ರಾಜ್ಯಗಳ ಪ್ರತಿನಿಧಿಗಳ ಸಮಿತಿ ರಚಿಸಿ 6 ತಿಂಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಿತ್ತು. ಅದರಂತೆ ಇದೀಗ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿ ಸಲ್ಲಿಸಿದ್ದು, ಆ ವರದಿ ಆಧರಿಸಿ ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.