ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದಾಖಲೆ ಒದಗಿಸಲು ಬಿಎಸ್ವೈ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಕಾಲಾವಕಾಶ ನೀಡಿದೆ. 


COMMERCIAL BREAK
SCROLL TO CONTINUE READING

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ್ದಾರೆ ಎನ್ನಲಾದ 15 ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಲ್ಲಿ ದೂರು ದಾಖಲಾಗಿತ್ತು. ಹೈಕೋರ್ಟ್ ಆ ದೂರುಗಳನ್ನು ವಜಾಗೊಳಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇದಲ್ಲದೆ ವಕೀಲ ಸಿರಜುದ್ದೀನ್ ಬಾಷಾ ಕೂಡ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಎರಡೂ ಅರ್ಜಿಗಳನ್ನು ವಿಲೀನಗೊಳಿಸಿ ಅಂತಿಮ‌ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರ ನೇತೃತ್ವದ ನ್ಯಾಯಪೀಠದ ಮುಂದೆ ಯಡಿಯೂರಪ್ಪ ಪರ ವಕೀಲ ಮುಕುಲ್ ರೋಹಟಗಿ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ಕಾಲವಕಾಶ ನೀಡುವಂತೆ ಬುಧವಾರ ಮನವಿ ಮಾಡಿಕೊಂಡರು. ಮುಕುಲ್ ರೋಹಟಗಿ ಅವರ ಮಾನ್ಯ ಮಾಡಿದ ನ್ಯಾಯಪೀಠವು ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ಕಾಲವಕಾಶ ನೀಡಿ ನವೆಂಬರ್ 14ರನಂತರ ಅಂತಿಮ ವಿಚಾರಣೆ ನಡೆಸುವುದಾಗಿ ತಿಳಿಸಿತು.


ಅಕ್ರಮ ಡಿನೋಟಿಫಿಕೇಷನ್ ಬಗ್ಗೆ  ಸಿಎಜಿ ವರದಿಯಲ್ಲಿ ಉಲ್ಲೇಖವಾಗಿತ್ತು. ಇದೇ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಲಾಗಿತ್ತು.