ಎಸ್ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿ
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅತ್ಯಂತ ಹಿಂದುಳಿದ ಎಸ್ʼಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್ʼಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಆಂತರಿಕ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು.
ನವದೆಹಲಿ: ಎಸ್ʼಸಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿರುವುದು ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: ಜೂನಿಯರ್ ಅನುಷ್ಕಾ ಶರ್ಮಾ ಜೊತೆ ಪಾಕ್ ನಾಯಕ ಬಾಬರ್ ಡೇಟಿಂಗ್! ಕೊಹ್ಲಿ ಪತ್ನಿಯಂತೆ ಕಾಣೋ ಈ ಸುಂದರಿ ಬೇರಾರು ಅಲ್ಲ...
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅತ್ಯಂತ ಹಿಂದುಳಿದ ಎಸ್ʼಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್ʼಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಆಂತರಿಕ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು. ನಮ್ಮ ಸರ್ಕಾರ ಆಂತರಿಕ ಮೀಸಲಾತಿಯನ್ನು ಸಂಪುಟದಲ್ಲಿ ಒಪ್ಪಿ, ಸರ್ಕಾರಿ ಆದೇಶವನ್ನು ಮಾಡಿ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ನಿಲುವನ್ನು ಇಂದು ಏಳು ನ್ಯಾಯಾಧೀಶರನ್ನೊಳಗೊಂಡ ಸರ್ವೋಚ್ಚ ನ್ಯಾಯಾಲಯದ ಸಂವಿಧಾನಿಕ ಪೀಠ ಎತ್ತಿ ಹಿಡಿದಿರುವುದು ಐತಿಹಾಸಿಕ ತೀರ್ಪು ಮತ್ತು ಎಸ್ʼಸಿ ಜನಾಂಗದ ಒಳ ಮೀಸಲಾತಿ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.
ಇದಕ್ಕೆ ಸಹಕಾರ ನೀಡಿದ ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಹಾಗೂ ಅಂದು ಎಸ್ʼಸಿ ಸಮುದಾಯದ ಸಚಿವರಾದಂತಹ ಗೋವಿಂದ ಕಾರಜೋಳ ಮತ್ತು ನನ್ನ ಸಚಿವ ಸಂಪುಟದ ಎಲ್ಲ ಸದಸ್ಯರಿಗೆ ಮತ್ತು ರಾಜ್ಯ ಬಿಜೆಪಿಯ ಎಲ್ಲ ನಾಯಕರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತದ್ವಿರುದ್ದವಾಗಿ ಸಂವಿಧಾನದ ಆರ್ಟಿಕಲ್ 341 ಕ್ಕೆ ತಿದ್ದುಪಡಿ ಮಾಡುವುದು ಅತ್ಯಂತ ಅಗತ್ಯತೆಯೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಅದನ್ನು ಇಂದು ಸರ್ವೋಚ್ಚ ನ್ಯಾಯಾಲಯ ತಳ್ಳಿ ಹಾಕಿ ರಾಜ್ಯ ಸರ್ಕಾರ ಎಸ್ಸಿ ಜನಾಂಗಕ್ಕೆ ವಂಚನೆ ಮಾಡುವ ನಿರ್ಣಯವನ್ನು ತಳ್ಳಿ ಹಾಕಿದೆ. ಈಗ ತಮ್ಮ ಸರ್ಕಾರ ಮಾಡಿರುವ ಶಿಫಾರಸ್ಸಿಗೆ ಜಯ ಸಿಕ್ಕಿದೆ ಎಂಬ ಸುಳ್ಳನ್ನು ಪ್ರಚಾರ ಮಾಡುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಆಗ ಆಫರ್ ಬಂದಾಗ ಬೇಡ ಅಂದ್ರು... ಈಗ ಅದೇ ನಿರ್ದೇಶಕ ಅವಕಾಶ ನೀಡಲಿ ಎಂದು ಕಾಯುತ್ತಿದ್ದಾನೆ ಈ ಹೀರೋ
ನನ್ನ ಮುಖ್ಯಮಂತ್ರಿ ಕಾಲದಲ್ಲಿ ಸಾಮಾಜಿಕ ನ್ಯಾಯ ಅತ್ಯಂತ ತಳ ಸಮುದಾಯಕ್ಕೆ ಸಿಗಬೇಕೆನ್ನುವ ನೀತಿಗೆ ಮತ್ತು ನಿರ್ಣಯಕ್ಕೆ ಜಯ ಸಿಕ್ಕಿರುವಂಥದ್ದು ನನಗೆ ಸಮಾಧಾನ ತಂದಿದೆ. ಎಲ್ಲ ಎಸ್ಸಿ ತಳ ಸಮುದಾಯಗಳಿಗೆ ಉಜ್ವಲ ಭವಿಷ್ಯ ಸಿಗಲಿ ಎಂದು ಅಭಿನಂದನೀಯ ಪೂರ್ವಕವಾಗಿ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ