Surat Court : ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಲು ಕಾರಣವಾದ ಕೋರ್ಟ್ ಶಿಕ್ಷೆಯನ್ನು ತಡೆಯುವಂತೆ ರಾಹುಲ್ ಗಾಂಧಿ ಸೂರತ್ ಕೋರ್ಟ್‌ಗೆ ಪತ್ರ ಬರೆದಿದ್ದರು. ಆದರೆ ಅದನ್ನು ಗುಜರಾತ್‌ನ ಸೆಷೆನ್ಸ್ ನ್ಯಾಯಾಲಯವು ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ.
Gujarat | Surat Court rejects the application filed by Congress leader Rahul Gandhi seeking stay on his conviction in the 2019 defamation case on 'Modi surname' remark. pic.twitter.com/BMVyXTkAs7
— ANI (@ANI) April 20, 2023
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಯವರನ್ನು ಅಪರಾಧಿ ಎಂದು ಘೋಷಿಸಿ ಶಿಕ್ಷೆ ವಿಧಿಸಲಾಗಿತ್ತು. ಮೇಲ್ಮನವಿ ಸಲ್ಲಿಸುವುದಕ್ಕಾಗಿ ಮೂವತ್ತು ದಿನಗಳ ಕಾಲ ಶಿಕ್ಷೆಯನ್ನು ಅಮಾನತು ಮಾಡಲಾಗಿತ್ತು. ಇದರ ಮರುದಿನವೇ ಸಂಸದರಾಗಿದ್ದ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಗೊಳಿಸಲಾಗಿತ್ತು.
ಇದನ್ನೂ ಓದಿ-ʼಲಿಂಗಾಯತ ಸಿಎಂʼ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ : ಸಿಎಂ ಸ್ಪಷ್ಟನೆ
2019ರಲ್ಲಿ ನಡೆದ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ "ಎಲ್ಲಾ ಕಳ್ಳರು ಮೋದಿ ಎಂಬ ಉಪನಾಮವನ್ನು ಹೇಗೆ ಹೊಂದಿದ್ದಾರೆ" ಎಂದು ಮೋದಿ ಅವರ ಉಪನಾಮದ ಕುರಿತು ಅವಹೇಳನ ಮಾತನಾಡಿದ್ದರು. ಇದಕ್ಕೆ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ದಾಖಲಿಸಿದ್ದರು.
ಮೇಲ್ಮನವಿ ನಂತರ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಲಾಯಿತು. ದೋಷಾರೋಪಣೆ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಎಂಟು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗುತ್ತಾರೆ. ಉನ್ನತ ನ್ಯಾಯಾಲಯವು ಅವರ ಮೇಲಿನ ಪ್ರಕರಣವನ್ನು ರದ್ದುಗೊಳಿಸಿದರೆ ಹಾಗೂ ಶಿಕ್ಷೆಯ ಅವಧಿಯನ್ನು ಕಡಿಮೆ ಮಾಡಿದರೆ ರಾಹುಲ್ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದಾಗಿದೆ.
ಇದನ್ನೂ ಓದಿ-ಇಷ್ಟೆಲ್ಲಾ ಮಾತಾಡುವ ಕಾಂಗ್ರೆಸ್ ಲಿಂಗಾಯತ ಸಿಎಂ ಘೋಷಿಸಲಿ: ಸೋಮಣ್ಣ ಸವಾಲ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.