ಚೆನ್ನೈ: ತುಮಕೂರಿನ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಇಲ್ಲಿನ ಡಾ.ರೇಲಾ ಇನ್​ಸ್ಟಿಟ್ಯೂಟ್ ಆಂಡ್ ಮೆಡಿಕಲ್ ಸೆಂಟರ್'ನಲ್ಲಿ ಶನಿವಾರ ಬೆಳಿಗ್ಗೆ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. 


COMMERCIAL BREAK
SCROLL TO CONTINUE READING

ಸ್ವಾಮೀಜಿಯವರಿಗೆ ಅಳವಡಿಸಿರುವ 11 ಸ್ಟಂಟ್ಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಇದರಿಂದಾಗಿ ಜ್ವರದಿಂದ ಬಳಲುತ್ತಿದ್ದಾರೆ. ಡಾ.ರೇಲಾ ಅವರು ಕಳೆದ ಎರಡು ವರ್ಷದ ಹಿಂದೆ ಶ್ರೀಗಳ ಆರೋಗ್ಯ ತಪಾಸಣೆ ಮಾಡಿದ್ದರು. ಶುಕ್ರವಾರವೂ ಅವರೇ ಶ್ರೀಗಳ ತಪಾಸಣೆ ಮಾಡಿದ್ದು, ಇಂದು ಬೆಳಿಗ್ಗೆ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ. 


ಇದೇ ವೇಳೆ, ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ದಾಖಲಾಗಿರುವ ಚೆನ್ನೈನ ರೇಲಾ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ಸೆಂಟರ್​ಗೆ ಇಂದು ಬೆಳಗ್ಗೆ ಮೈಸೂರಿನ ಸುತ್ತೂರು ಮಠದ ಶ್ರೀ ದೇಶಿಕೇಂದ್ರ ಮಹಾ ಸ್ವಾಮೀಜಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. 


ಶುಕ್ರವಾರ ಬೆಳಿಗ್ಗೆ ಏರ್ ಆಂಬುಲೆನ್ಸ್ ಮೂಲಕ ಶಿವಕುಮಾರ ಸ್ವಾಮೀಜಿ ಅವರನ್ನು ಚೆನ್ನೈಗೆ ಕರೆತರಲಾಗಿತ್ತು. ಶಿವಕುಮಾರ ಸ್ವಾಮೀಜಿ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.