Police Commissioner Labhu Ram : ಇಸ್ಪೀಟ್ ಆಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ಅಮಾನತು
ಇಸ್ಪೀಟ್ ಆಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್ ಆದೇಶ ಹೊರಡಿಸಿದ್ದಾರೆ.
ಹುಬ್ಬಳ್ಳಿ : ಇಸ್ಪೀಟ್ ಆಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್ ಆದೇಶ ಹೊರಡಿಸಿದ್ದಾರೆ.
ನಗರದ ಅಕ್ಷಯ ಕಾಲನಿಯ ಮನೆಯೊಂದರಲ್ಲಿ ಮೊನ್ನೆ ರಾತ್ರಿ ಇಸ್ಪೀಟ್ ಜೂಜಾಟವಾಡಿದ್ದ ಪ್ರಕರಣದ ಈ ನಾಲ್ವರು ಪೊಲೀಸ್ ಅಧಿಕಾರಿ ಸಿಬ್ಬಂದಿ ಅಮಾನತು ಮಾಡಲಾಗಿದೆ.
ಇದನ್ನೂ ಓದಿ : Karnataka BJP : ರಾಜ್ಯ ರಾಜಕೀಯದ ಮೇಲೆ ಹದ್ದಿನ ಕಣ್ಣಿಟ್ಟ ಬಿಜೆಪಿ ಹೈಕಮಾಂಡ್!
ಹುಬ್ಬಳ್ಳಿ-ಧಾರವಾಡ ಸಿಎಆರ್ ರಿಸರ್ವ್ ಪೊಲೀಸ್ ಇನ್‌ಸ್ಪೆಕ್ಟರ್ (ಆರ್ ಪಿಐ) ಸಂತೋಷ ಬೋಜಪ್ಪಗೋಳ, ಸಿಎಆರ್ ಹೆಡ್ ಕಾನ್ ಸ್ಟೆಬಲ್‌ಗಳಾದ ಮುತ್ತಪ್ಪ ಕಾಟನಾಯಕ, ನವೀನ ತೋಪಲಕಟ್ಟಿ, ಪೂರ್ವ ಸಂಚಾರ ಠಾಣೆಯ ಕಾನ್‌ಸ್ಟೆಬಲ್ ಬಸವಣ್ಯಪ್ಪ ಬಾವಿಹಾಳ ಹಾಗೂ ಸಿಎಆರ್‌ನ ನಿವೃತ್ತ ಹೆಡ ಕಾನ್‌ಸ್ಟೆಬಲ್ ಶ್ರೀಕಾಂತ ಗೋಂದಕರ ಅಮಾನತುಗೊಂಡ ಸಿಬ್ಬಂದಿಗಳು.
ಅಕ್ಷಯ ಕಾಲನಿಯ ಎರಡನೇ ಹಂತದ 337 ಸಂಖ್ಯೆಯ ಬಾಡಿಗೆ ಮನೆಯಲ್ಲಿ ಪೊಲೀಸ್ ಅಧಿಕಾರಿ- ಸಿಬ್ಬಂದಿಯೇ ಎಕ್ಕ- ರಾಜ- ರಾಣಿ ಆಟವಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸ್ ಆಯುಕ್ತರ ಸೂಚನೆಯಂತೆ ಗೋಕುಲ ರೋಡ್ ಠಾಣೆ ಇನ್‌ಸ್ಪೆಕ್ಟರ್ ಜೆ.ಎಂ. ಕಾಲಿಮಿರ್ಚಿ ನೇತೃತ್ವದ ತಂಡ ದಾಳಿ ನಡೆಸಿತ್ತು. ದಾಳಿ ವೇಳೆ ಗೋಕುಲ ರೋಡ್ ಪೊಲೀಸರು ಐವರನ್ನ ವಶಕ್ಕೆ ಪಡೆದು, ಪ್ರಕರಣ ದಾಖಲಿಸಿ ಕೊಂಡಿದ್ದರು.
ಅಮಾನತು ಮಾಡಿ ಮಾತನಾಡಿದ ಪೊಲೀಸ್ ಆಯುಕ್ತ ಲಾಭೂರಾಮ್, ಕಾನೂನು ಉಲ್ಲಂಘಿಸುವವರು ಯಾರೇ ಆಗಿದ್ದರೂ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದರು.
ಇದನ್ನೂ ಓದಿ : Vegetable Price: ಗ್ರಾಹಕರೇ ಗಮನಿಸಿ... ಹೀಗಿದೆ ನೋಡಿ ಇಂದಿನ ತರಕಾರಿ ಬೆಲೆ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.